ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಶ್ರೇಯಸ್ ತಂಡಕ್ಕೆ ಸೇರ್ಪಡೆ ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ ಸೇರಿಕೊಳ್ಳಲಿದ್ದಾರೆ. ಗಾಯದ ಸಮಸ್ಯೆಗೆ ಒಳಗಾಗಿದ್ದ ಅಯ್ಯರ್, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನ ಶಿಬಿರದಲ್ಲಿ ಭಾಗವಹಿಸಿದ್ದರು. ಈಗ ಸಂಪೂರ್ಣ ದೈಹಿಕ ಸಾಮರ್ಥ್ಯ ಮರಳಿ ಪಡೆದಿರುವ ಅಯ್ಯರ್, ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕುಟುಕು ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಬಿಸಿಸಿಐ ಆಯ್ಕೆ ಸಮಿತಿಯ ಚೇತನ್ ಶರ್ಮಾ 🚨 🚨: . # | # 🔽://./0KtDRJYhvg ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಯ್ಯರ್ ಆಡಿದ್ದರು. ಬಳಿಕ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಗಾಯದಿಂದಾಗಿ ಹೊರಗುಳಿದಿದ್ದರು. ಆಸ್ಟ್ರೇಲಿಯಾ ವಿರುದ್ಧದ ಸರಣಿ ಮೊದಲ ಪಂದ್ಯಕ್ಕೂ ಅಯ್ಯರ್ ಅಲಭ್ಯರಾಗಿದ್ದರು. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ಫೆಬ್ರುವರಿ 17ರಿಂದ 21ರವರೆಗೆ ನಡೆಯಲಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್ ಅಂತರದ ಗೆಲುವು ದಾಖಲಿಸಿರುವ ಭಾರತ ತಂಡವು, ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.