ಆಸೀಸ್ ಸರಣಿಗೆ ಭಾರತ ತಂಡ ಪ್ರಕಟ; ಅಶ್ವಿನ್‌ ಪುನರಾಗಮನ ಬೆಂಗಳೂರು: ಏಕದಿನ ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ಸೂಚಿಸಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸಲಾಗಿದ್ದಾರೆ. ಅಂತಿಮ ಪಂದ್ಯಕ್ಕೆ ರೋಹಿತ್, ವಿರಾಟ್ ಹಾಗೂ ಪಾಂಡ್ಯ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸಹ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಅಶ್ವಿನ್ 2022ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಕೊನೆಯದಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದರು. ಗಾಯಾಳು ಅಕ್ಷರ್ ಪಟೇಲ್ ಅವರನ್ನು ಫಿಟ್ ಆದ್ದಲ್ಲಿ ಕೊನೆಯ ಪಂದ್ಯದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಏಕದಿನ ಸರಣಿ ವೇಳಾಪಟ್ಟಿ ಇಂತಿದೆ: ಸೆ.22: ಮೊಹಾಲಿ ಸೆ.24: ಇಂದೋರ್ ಸೆ.27: ರಾಜ್‌ಕೋಟ್ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಿಗೆ ಟೀಮ್ ಇಂಡಿಯಾ ಇಂತಿದೆ: ಕೆ.ಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜ (ಉಪನಾಯಕ), ಋತುರಾಜ್ ಗಾಯಕವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್. ಅಶ್ವಿನ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ದ ಕೃಷ್ಣ. ಅಂತಿಮ ಏಕದಿನಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ (ಫಿಟ್ ಆದ್ದಲ್ಲಿ), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್. ಅಶ್ವಿನ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.