ಮಹಿಳಾ ಪ್ರೀಮಿಯರ್ ಲೀಗ್: ಮುಂಬೈ ಇಂಡಿಯನ್ಸ್‌ಗೆ ಜೂಲನ್ ಮೆಂಟರ್, ಶಾರ್ಲೆಟ್ ಕೋಚ್ ಮುಂಬೈ: ವೇಗದ ಬೌಲರ್‌ ಜೂಲನ್‌ ಗೋಸ್ವಾಮಿ ಅವರು ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಟೂರ್ನಿಯಲ್ಲಿ ಪಾಲ್ಗೊಳ್ಳುವ ಮುಂಬೈ ಇಂಡಿಯನ್ಸ್‌ ತಂಡದ ಮೆಂಟರ್‌ ಹಾಗೂ ಬೌಲಿಂಗ್ ಕೋಚ್‌ ಆಗಿ ನೇಮಕಗೊಂಡಿದ್ದಾರೆ. ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಮಾಜಿ ನಾಯಕಿ ಶಾರ್ಲೆಟ್ ಎಡ್ವರ್ಡ್ಸ್ ಅವರನ್ನು ಮುಖ್ಯ ಕೋಚ್‌ ಆಗಿ ನೇಮಿಸಲಾಗಿದೆ. ಭಾರತ ತಂಡದ ಆಲ್‌ರೌಂಡರ್‌ ಆಗಿದ್ದ ದೇವಿಕಾ ಪಾಲ್ಶಿಕಾರ್‌ ಅವರು ಬ್ಯಾಟಿಂಗ್‌ ಕೋಚ್ ಆಗಿಯೂ, ತೃಪ್ತಿ ಚಂದಗಡ್ಕರ್‌ ಭಟ್ಟಾಚಾರ್ಯ ಅವರು ಮ್ಯಾನೇಜರ್‌ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಜೂಲನ್‌ ಅವರು ಕಳೆದ ವರ್ಷವಷ್ಟೇ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು. ತಮ್ಮ 20 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ 350ಕ್ಕೂ ಅಧಿಕ ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.