| 31ನೇ ಸಲ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್ ಕಬಳಿಸಿದ ಆರ್. ಅಶ್ವಿನ್ ನಾಗ್ಪುರ: ಭಾರತ ಕ್ರಿಕೆಟ್‌ ತಂಡದ ಪ್ರಮುಖ ಸ್ಪಿನ್ನರ್‌ ಆರ್‌. ಅಶ್ವಿನ್‌ ಅವರು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿದ್ದಾರೆ. ಆ ಮೂಲಕ ಟೆಸ್ಟ್‌ ಕ್ರಿಕೆಟ್‌ನ ಇನಿಂಗ್ಸ್‌ವೊಂದರಲ್ಲಿ 31ನೇ ಬಾರಿಗೆ ಈ ಸಾಧನೆ ಮಾಡಿದ ಶ್ರೇಯಕ್ಕೆ ಭಾಜನರಾದರು. ನಗರದಲ್ಲಿರುವ 'ವಿದರ್ಭ ಕ್ರಿಕೆಟ್ ಸಂಸ್ಥೆ' ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 177 ರನ್‌ ಗಳಿಸಿ ಆಲೌಟ್‌ ಆಗಿತ್ತು. ಇದಕ್ಕುತ್ತರವಾಗಿ ಭಾರತ ತಂಡ 400 ರನ್‌ ಕಲೆಹಾಕಿತ್ತು. 228 ರನ್‌ಗಳ ಹಿನ್ನಡೆಯೊಂದಿಗೆ ಮೂರನೇ ದಿನ ಎರಡನೇ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 91 ರನ್‌ ಗಳಿಸಿ ಆಲೌಟ್‌ ಆಗುವುದರೊಂದಿಗೆ ಇನಿಂಗ್ಸ್‌ ಹಾಗೂ 132 ರನ್‌ ಅಂತರದ ಸೋಲೊಪ್ಪಿಕೊಂಡಿದೆ. ಸ್ಪಿನ್ ಬಲೆ ಎಣೆದ ಆರ್‌.ಅಶ್ವಿನ್‌ ಐದು ವಿಕೆಟ್‌ ಕಿತ್ತರೆ, ರವೀಂದ್ರ ಜಡೇಜ 2 ಹಾಗೂ ಅಕ್ಷರ್ ಪಟೇಲ್‌ 1 ವಿಕೆಟ್‌ ಉರುಳಿಸಿದರು. ಇನ್ನೆರಡು ವಿಕೆಟ್‌ಗಳು ವೇಗಿ ಮೊಹಮ್ಮದ್ ಶಮಿ ಪಾಲಾದವು. ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್‌ ಸಾಧನೆ ಮಾಡಿದ ಹತ್ತು ಬೌಲರ್‌ಗಳು ಇವನ್ನೂ ಓದಿ * 1st : ಭಾರತಕ್ಕೆ ಇನಿಂಗ್ಸ್ ಹಾಗೂ 132 ರನ್ ಗೆಲುವು * ರಣಜಿ ಸೆಮಿಫೈನಲ್: ಕರ್ನಾಟಕಕ್ಕೆ ಇನಿಂಗ್ಸ್ ಹಿನ್ನಡೆ, ಫೈನಲ್ ಪ್ರವೇಶ ಅನುಮಾನ ‘! 31st 5-! 🔥 - # & +!# # ../FhOeC52DPF ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.