ಮಹಿಳಾ ಪ್ರೀಮಿಯರ್ ಲೀಗ್: ಗುಜರಾತ್ ಜೈಂಟ್ಸ್‌ಗೆ ಮಿಥಾಲಿ ಮೆಂಟರ್ ಅಹಮದಾಬಾದ್: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರನ್ನು ಮುಂಬರುವ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುವ ಗುಜರಾತ್ ಜೈಂಟ್ಸ್ ತಂಡಕ್ಕೆ ಮೆಂಟರ್ ಆಗಿ ನೇಮಕ ಮಾಡಲಾಗಿದೆ. 23 ವರ್ಷಗಳ ಕಾಲ ಭಾರತ ತಂಡದಲ್ಲಿ ಆಡಿದ್ದ ಮಿಥಾಲಿ ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ್ದಾರೆ. 40 ವರ್ಷದ ಮಿಥಾಲಿ ಈಚೆಗೆ ನಿವೃತ್ತಿ ಘೋಷಿಸಿದ್ದರು. ‘ಇದೇ ಮೊದಲ ಬಾರಿಗೆ ಮಹಿಳಾ ಐಪಿಎಲ್ ಆಯೋಜನೆಯಾಗುತ್ತಿದೆ. ಮಹಿಳಾ ಕ್ರಿಕೆಟ್ ಬೆಳವಣಿಗೆಯ ದೃಷ್ಟಿಯಿಂದ ಇದೊಂದು ಪ್ರಮುಖ ಹೆಜ್ಜೆಯಾಗಿದೆ. ಅದಾನಿ ಸಮೂಹವು ಕ್ರಿಕೆಟ್‌ನಲ್ಲಿ ಸಹಭಾಗಿತ್ವ ಹೊಂದಿರುವುದು ಆಶಾದಾಯಕ ಬೆಳವಣಿಗೆ’ ಎಂದು ಮಿಥಾಲಿ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.