1st : ಶುಭಮನ್ ಗಿಲ್ ಸತತ ಎರಡನೇ ಶತಕ ಸಾಧನೆ ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಉದಯೋನ್ಮುಖ ಆರಂಭಿಕ ಬ್ಯಾಟರ್ ಶುಭಮನ್ ಗಿಲ್, ಸತತ ಎರಡನೇ ಶತಕ ಸಾಧನೆ ಮಾಡಿದ್ದಾರೆ. ಹೈದರಾಬಾದ್‌ನಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಗಿಲ್ ಅಮೋಘ ಶತಕ ಗಳಿಸಿದರು. ಈ ಮೂಲಕ ಏಕದಿನದಲ್ಲಿ ಅತಿ ವೇಗದಲ್ಲಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ (19 ಇನ್ನಿಂಗ್ಸ್) ಎನಿಸಿದ್ದಾರೆ. 🚨 - 1000 (19) 👏👏 - ://./DXx5mqRguU # @ ../D3ckhBBPxn ಇದೀಗಷ್ಟೇ ಅಂತ್ಯಗೊಂಡ ಶ್ರೀಲಂಕಾ ವಿರುದ್ಧ ತಿರುವನಂತಪುರದಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲೂ ಗಿಲ್ ಸೆಂಚುರಿ ಬಾರಿಸಿದ್ದರು. ಅಮೋಘ ಬ್ಯಾಟಿಂಗ್ ಲಯ ಮುಂದುವರಿಸಿದ ಗಿಲ್, 86 ಎಸೆತಗಳಲ್ಲಿ ಶತಕ ಗಳಿಸಿದರು. ಈ ಮೂಲಕ ನ್ಯೂಜಿಲೆಂಡ್ ಬೌಲರ್‌ಗಳನ್ನು ಕಾಡಿದರು. 19 ಇನ್ನಿಂಗ್ಸ್‌ಗಳಲ್ಲಿ 3ನೇ ಶತಕ... ಶುಭಮನ್ ಗಿಲ್, ಏಕದಿನದಲ್ಲಿ 19 ಇನ್ನಿಂಗ್ಸ್‌ಗಳಲ್ಲಿ ಮೂರನೇ ಶತಕ ಸಾಧನೆ ಮಾಡಿದ್ದಾರೆ. ಈ ಮೊದಲು ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ನಾಯಕ ರೋಹಿತ್ ಶರ್ಮಾ 34, ವಿರಾಟ್ ಕೊಹ್ಲಿ 8, ಇಶಾನ್ ಕಿಶನ್ 5 ಮತ್ತು ಸೂರ್ಯಕುಮಾರ್ ಯಾದವ್ 31 ರನ್ ಗಳಿಸಿ ಔಟ್ ಆದರು. 💯📸@ - ://./DXx5mqRguU # @ ../rEmRg6BzJa ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.