: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದ ಶ್ರೇಯಸ್ ಅಯ್ಯರ್ ಹೈದರಾಬಾದ್: ಟೀಮ್ ಇಂಡಿಯಾ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದು, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ‘ಬೆನ್ನುನೋವಿನ ಕಾರಣ ಶ್ರೇಯಸ್ ಅಯ್ಯರ್ ಮುಂಬರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಶ್ರೇಯಸ್‌ ಬದಲಿಗೆ ರಜತ್ ಪಾಟಿದಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೈದರಾಬಾದ್‌ನಲ್ಲಿ ಬುಧವಾರ (ಜ.18) ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಅಯ್ಯರ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್‌ಗೆ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಇದು ಉತ್ತಮ ಅವಕಾಶ ಎಂದು ವಿಶ್ಲೇಷಿಸಲಾಗಿದೆ. ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ಇಶಾನ್‌ ಕಿಶನ್‌ (ವಿಕೆಟ್‌ ಕೀಪರ್‌), ವಿರಾಟ್‌ ಕೊಹ್ಲಿ, ರಜತ್ ಪಾಟಿದಾರ್, ಸೂರ್ಯಕುಮಾರ್‌ ಯಾದವ್, ಕೆ.ಎಸ್‌.ಭರತ್‌ (ವಿಕೆಟ್‌ ಕೀಪರ್‌), ಹಾರ್ದಿಕ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌, ಶಹಬಾಜ್‌ ಅಹ್ಮದ್‌, ಶಾರ್ದೂಲ್‌ ಠಾಕೂರ್, ಯುಜುವೇಂದ್ರ ಚಾಹಲ್‌, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್‌, ಉಮ್ರಾನ್ ಮಲಿಕ್ ಇವನ್ನೂ ಓದಿ... * ನೇಪಾಳ ವಿಮಾನ ದುರಂತ: ಘಟನೆಗೂ ಮುನ್ನ ಟಿಕ್‌ ಟಾಕ್ ವಿಡಿಯೊ ಮಾಡಿದ್ದ ಗಗನಸಖಿ! * ‘ದಿ ವ್ಯಾಕ್ಸಿನ್ ವಾರ್’ ಸೆಟ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಪತ್ನಿ ಪಲ್ಲವಿಗೆ ಗಾಯ * ವಿಡಿಯೊ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿ * ಟೀಮ್ ಇಂಡಿಯಾ ಆಟಗಾರರನ್ನು ಭೇಟಿಯಾದ ಆರ್‌ಆರ್‌ಆರ್‌ ಖ್ಯಾತಿಯ ಜ್ಯೂ.ಎನ್‌ಟಿಎರ್ - 3- . . - ://./87CTKpdFZ3 # ../JPZ9dzNiB6 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.