ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯ: ಭಾರತ ಬ್ಯಾಟಿಂಗ್‌ ಆಯ್ಕೆ ತಿರುವನಂತಪುರ: ಸರಣಿಯಲ್ಲಿ ಕ್ಲೀನ್‌ಸ್ವೀಪ್ ಮಾಡುವತ್ತ ಚಿತ್ತ ನೆಟ್ಟಿರುವ ಭಾರತ ತಂಡ, ಗ್ರೀನ್‌ಫೀಲ್ಡ್‌ ಪಿಚ್‌ನಲ್ಲಿ ನಡೆಯಲಿರುವ ಶ್ರೀಲಂಕಾ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಆತಿಥೇಯ ತಂಡವೂ 2–0ಯಿಂದ ಮುಂದಿದೆ. ಹಾರ್ದಿಕ್‌ ಪಾಂಡ್ಯ ಮತ್ತು ಉಮ್ರಾನ್‌ ಮಲ್ಲಿಕ್‌ ಬದಲು ಸೂರ್ಯಕುಮಾರ್‌ ಯಾದವ್‌ ಮತ್ತು ವಾಷಿಂಗ್ಟನ್‌ ಸುಂದರ್‌ಗೆ ಜಾಗ ನೀಡಲಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಸರಣಿಯಲ್ಲಿ ಉತ್ತಮವಾಗಿ ಆಡಿದ್ದ ಸೂರ್ಯಕುಮಾರ್ ಯಾದವ್‌ಗೆ ಎರಡೂ ಪಂದ್ಯಗಳಲ್ಲಿ ವಿಶ್ರಾಂತಿ ಕೊಡಲಾಗಿತ್ತು. ಶ್ರೀಲಂಕಾ ತಂಡದಲ್ಲಿ ಧನಂಜಯ್‌ ಸಿಲ್ವಾ ಮತ್ತು ದುನಿತ್‌ ಅವರನ್ನು ಕೈಬಿಡಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.