ಕ್ರಿಕೆಟ್: ಕಮಿನ್ಸ್‌ ಬಳಗಕ್ಕೆ ಟಾಡ್ ಮರ್ಫಿ ಸೇರ್ಪಡೆ ಮೆಲ್ಬರ್ನ್: ಆಫ್‌ಸ್ಪಿನ್ನರ್ ಟಾಡ್ ಮರ್ಫಿ ಭಾರತದಲ್ಲಿ ಟೆಸ್ಟ್ ಸರಣಿ ಆಡಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯಾ ಬುಧವಾರ ಪ್ರಕಟಿಸಿರುವ ತಂಡದಲ್ಲಿ ಸ್ಪಿನ್ನರ್‌ಗಳಿಗೆ ಮಣೆ ಹಾಕಿದೆ. ಈ ಪೈಕಿ ಟಾಡ್ ಮರ್ಫಿ ತಂಡಕ್ಕೆ ಪದಾರ್ಪಣೆ ಮಾಡುವರು. ಇವರೊಂದಿಗೆ ಅನುಭವಿಗಳಾದ ನೇಥನ್ ಲಯನ್, ಆ್ಯಷ್ಟನ್ ಆಗರ್ ಮತ್ತು ಮಿಚೆಲ್ ಸ್ವಿಪ್ಸನ್ ಕೂಡ ಇದ್ದಾರೆ. ಫೆ 9ರಿಂದ ಮಾರ್ಚ್ 13ರವರೆಗೆ ಭಾರತದಲ್ಲಿ ಟೆಸ್ಟ್ ಸರಣಿ ನಡೆಯಲಿದೆ. ನಾಗ್ಪುರ, ನವದೆಹಲಿ, ಧರ್ಮಶಾಲಾ ಹಾಗೂ ಅಹಮದಾಬಾದ್‌ನಲ್ಲಿ ಪಂದ್ಯಗಳು ನಡೆಯಲಿವೆ. ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆ್ಯಷ್ಟನ್ ಆಗರ್, ಸ್ಕಾಟ್ ಬೊಲಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಪೀಟರ್ ಹ್ಯಾಂಡ್ಸ್‌ಕಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಷೇನ್, ನೇಥನ್ ಲಯನ್, ಲ್ಯಾನ್ಸ್ ಮಾರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಷಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವಿಪ್ಸನ್, ಡೇವಿಡ್ ವಾರ್ನರ್. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.