2nd : ಆಸ್ಟ್ರೇಲಿಯಾಗೆ 400 ರನ್‌ಗಳ ಗೆಲುವಿನ ಗುರಿ ನೀಡಿದ ಭಾರತ ಇಂದೋರ್: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾಗೆ 400 ರನ್‌ಗಳ ಗೆಲುವಿನ ಗುರಿ ನೀಡಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್‌ ಮಾಡಿದ ಭಾರತ 50 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 399 ರನ್‌ಗಳಿಸಿದೆ. ಆಸ್ಟ್ರೇಲಿಯಾ ಈ ಪಂದ್ಯವನ್ನು ಗೆಲ್ಲಬೇಕಾದರೆ 50 ಓವರ್‌ಗಳಲ್ಲಿ 400 ರನ್‌ಗಳಿಸಬೇಕಿದೆ. ಭಾರತದ ಪರ ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಬಿರುಸಿನ ಆಟವಾಡಿ ತಲಾ ಶತಕ ಬಾರಿಸಿದರು. ರಾಹುಲ್‌ 52, ಸೂರ್ಯಕುಮಾರ್‌ 72 ರನ್‌ಗಳಿಸಿ ಗಮನ ಸೆಳೆದರು. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಜಯಿಸಿರುವ ಭಾರತ ತಂಡ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1–0ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಭಾರತ: ಕೆ.ಎಲ್. ರಾಹುಲ್ (ನಾಯಕ–ವಿಕೆಟ್‌ಕೀಪರ್), ಶುಭಮನ್ ಗಿಲ್, ಋತುರಾಜ್ ಗಾಯಕವಾಡ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಶಮಿ, ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಷೇನ್, ಕ್ಯಾಮೆರಾನ್ ಗ್ರೀನ್, ಮ್ಯಾಟ್ ಶಾರ್ಟ್, ಅಲೆಕ್ಸ್ ಕೆರ್ರಿ, ಸೀನ್ ಅಬಾಟ್, ಆ್ಯಡಂ ಜಂಪಾ, ಜೋಶ್ ಇಂಗ್ಲಿಷ್ (ವಿಕೆಟ್‌ಕೀಪರ್), ಸ್ಪೆನ್ಸರ್ ಜಾನ್ಸನ್, ಜೋಶ್ ಹೇಜಲ್‌ವುಡ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.