ಹೆಚ್ಚಿನ ಚಿಕಿತ್ಸೆಗಾಗಿ ರಿಷಭ್‌ ಪಂತ್ ವಿಮಾನದ ಮೂಲಕ ಮುಂಬೈಗೆ ಸ್ಥಳಾಂತರ ನವದೆಹಲಿ/ಮುಂಬೈ: ಭಾರತ ಕ್ರಿಕೆಟ್ ತಂಡದ ವಿಕೆಟ್‌ ಕೀಪರ್ ರಿಷಭ್‌ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಡೆಹ್ರಾಡೂನ್‌ನಿಂದ ಮುಂಬೈಗೆ ವಿಮಾನ ಮೂಲಕ ಸ್ಥಳಾಂತರಿಸಲಾಗಿದೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿ ಯಲ್ಲಿ ಈಚೆಗೆ ಸಂಭವಿಸಿದ್ದ ಕಾರು ಅಪಘಾತದಲ್ಲಿ ಪಂತ್ ಗಾಯ ಗೊಂಡಿದ್ದರು. ಪಂತ್ ಅವರ ಮುಖದ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ. ಅವರ ಕಾಲುಗಳ ಅಸ್ಥಿಮಜ್ಜೆಯಲ್ಲಿ ಊತ ಇರುವುದು ಎಂಆರ್‌ಐ ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾಗಿದೆ. ಆದ್ದರಿಂದ ಉನ್ನತಮಟ್ಟ ಚಿಕಿತ್ಸೆಗಾಗಿ ಅವರನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.