ಚಾಮುಂಡಿ ಬೆಟ್ಟಕ್ಕೆ ರಾಹುಲ್‌ ಮೈಸೂರು: ಕ್ರಿಕೆಟಿಗ ಕೆ.ಎಲ್‌.ರಾಹುಲ್‌ ಬುಧವಾರ ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು. ಐದು ವರ್ಷದ ಹಿಂದೆ ರಣಜಿ ಪಂದ್ಯವಾಡುವ ಸಂದರ್ಭದಲ್ಲಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಬುಧವಾರ 15 ನಿಮಿಷ ಪೂಜೆ ಹಾಗೂ ಪಾರ್ಥನೆ ಸಲ್ಲಿಸಿದ ನಂತರ ವಾಪಸಾಗುತ್ತಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಭಾರತ– ಶ್ರೀಲಂಕಾ ಟ್ವೆಂಟಿ–20 ಸರಣಿಯಿಂದ ವಿಶ್ರಾಂತಿ ಪಡೆದಿರುವ ಅವರು ಏಕದಿನ ಸರಣಿಯಲ್ಲಿ ಭಾಗವಹಿಸಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.