2023: ಭಾರತಕ್ಕೆ ಇಂದು ಲಂಕಾ ಸವಾಲು ಕೊಲಂಬೊ: ಇಂದು (ಮಂಗಳವಾರ) ನಡೆಯಲಿರುವ ಸೂಪರ್‌ ಫೋರ್‌ ಹಂತದ ಪಂದ್ಯದಲ್ಲಿ ರೋಹಿತ್‌ ಶರ್ಮಾ ಬಳಗ, ಆತಿಥೇಯ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇದರಿಂದ ಭಾರತ ತಂಡ ಸತತ ಮೂರನೇ ದಿನ ಕಣಕ್ಕಿಳಿದಂತಾಗುತ್ತದೆ. ಪಾಕ್‌ ವಿರುದ್ಧ ಭಾನುವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದ ಅರ್ಧದಲ್ಲೇ ನಿಂತಿತ್ತು. ಮೀಸಲು ದಿನವಾದ ಸೋಮವಾರ ಮುಂದುವರಿಸಲಾಗಿತ್ತು. ಶ್ರೀಲಂಕಾ ತಂಡ ಸೂಪರ್‌ ಫೋರ್‌ ಹಂತದ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿತ್ತು. ಲೀಗ್‌ ಹಂತದಲ್ಲಿ ಎರಡು ಪಂದ್ಯಗಳನ್ನು ಗೆದ್ದುಕೊಂಡಿದ್ದ ಆತಿಥೇಯ ತಂಡ ಟೂರ್ನಿಯಲ್ಲಿ ಅಜೇಯವಾಗಿ ಉಳಿದುಕೊಂಡಿದೆ. ಪಂದ್ಯ ಆರಂಭ: ಮಧ್ಯಾಹ್ನ 3, ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.