: ಫೀಲ್ಡಿಂಗ್ ವೇಳೆ ಗಾಯಗೊಂಡ ರೋಹಿತ್‌ ಶರ್ಮಾಗೆ ಸ್ಕ್ಯಾನಿಂಗ್ ಢಾಕಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಈ ಕುರಿತು ಬಿಸಿಸಿಐ ಟ್ವೀಟ್‌ನಲ್ಲಿ ತಿಳಿಸಿದೆ. ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಬಾಂಗ್ಲಾದೇಶ ಇನ್ನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಮೊಹಮ್ಮದ್ ಸಿರಾಜ್ ಎಸೆದ ಚೆಂಡು ಬಾಂಗ್ಲಾ ಆರಂಭಿಕ ಬ್ಯಾಟರ್ ಅನಾಮುಲ್ ಹಕ್ ಅವರ ಬ್ಯಾಟ್‌ಗೆ ಸವರಿ ಸ್ಲಿಪ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಅವರತ್ತ ರಭಸದಿಂದ ಸಾಗಿತ್ತು. # ../4IAOHpt1Ua ಆದರೆ ಕ್ಯಾಚ್ ಅನ್ನು ಕೈಚೆಲ್ಲಿದ ರೋಹಿತ್, ಎಡಗೈಗೆ ಗಾಯಮಾಡಿಕೊಂಡಿದ್ದರು. ರೋಹಿತ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ತಕ್ಷಣವೇ ರೋಹಿತ್ ಮೈದಾನ ತೊರೆದರು. ಬಳಿಕ ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಸ್ಕ್ಯಾನಿಂಗ್‌ಗಾಗಿ ತೆರಳಿದ್ದಾರೆ ಎಂದು ತಿಳಿಸಿದೆ. ಈಗ ಭಾರತದ ಇನ್ನಿಂಗ್ಸ್ ವೇಳೆ ರೋಹಿತ್ ಬ್ಯಾಟಿಂಗ್ ಮಾಡಲು ಕ್ರೀಸಿಗಿಳಿಯಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ. : 2nd . . . ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.