: ಪಂತ್ ಮ್ಯಾಚ್ ವಿನ್ನರ್, ಸಂಜು ಕಾಯಬೇಕಾಗಿದೆ: ಧವನ್ ಕ್ರೈಸ್ಟ್‌ಚರ್ಚ್: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಸೋಲನ್ನು ಅನುಭವಿಸಿದೆ. ಸತತ ವೈಫಲ್ಯದ ಹೊರತಾಗಿಯೂ ರಿಷಭ್ ಪಂತ್‌ಗೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ಸಂಜು ಸ್ಯಾಮ್ಸನ್‌ಗೆ ಅವಕಾಶ ನಿರಾಕರಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿರುವ ನಾಯಕ ಶಿಖರ್ ಧವನ್, ರಿಷಭ್ ಪಂತ್ ಮ್ಯಾಚ್ ವಿನ್ನರ್ ಆಗಿದ್ದು, ಸಂಜು ತಮ್ಮ ಅವಕಾಶಕ್ಕಾಗಿ ಕಾಯಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: : ಅಂತಿಮ ಏಕದಿನ ಮಳೆಯಿಂದಾಗಿ ರದ್ದು; ನ್ಯೂಜಿಲೆಂಡ್‌ಗೆ ಸರಣಿ ಗೆಲುವು ರಿಷಭ್ ಪಂತ್ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತು ಮಾಡಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ ಕಠಿಣ ಸಮಯ ಎದುರಾದಾಗ ಅಂತಹ ಆಟಗಾರನನ್ನು ಬೆಂಬಲಿಸಬೇಕಾಗುತ್ತದೆ ಎಂದು ಹೇಳಿದರು. ನಿಸ್ಸಂಶಯವಾಗಿಯೂ ಅವಕಾಶ ಸಿಕ್ಕಾಗೆಲ್ಲಾ ಸಂಜು ಅತ್ಯುತ್ತಮವಾಗಿ ಆಡುತ್ತಿದ್ದಾರೆ. ಆದರೆ ಕೆಲವೊಮ್ಮೆ ಅವಕಾಶಕ್ಕಾಗಿ ಕಾಯಬೇಕಾಗಿದೆ. ಏಕೆಂದರೆ ಮತ್ತೊಬ್ಬ ಆಟಗಾರ (ಪಂತ್) ಕೂಡ ಮ್ಯಾಚ್ ವಿನ್ನರ್ ಆಗಿದ್ದು, ಕಠಿಣ ಸಮಯದಲ್ಲಿ ಅವರನ್ನು ಬೆಂಬಲಿಸಬೇಕಾಗುತ್ತದೆ ಎಂದು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಪಂತ್ ಸತತ ವೈಫಲ್ಯ ಅನುಭವಿಸಿದ್ದಾರೆ. ಕೊನೆಯ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ (10, 15, 11, 6, 6, 3, 9, 9 27) ನಿರಾಸೆ ಮೂಡಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.