| : ಭಾರತ ಎದುರು ಟಾಸ್‌ ಗೆದ್ದ ಪಾಕಿಸ್ತಾನ ಬೌಲಿಂಗ್‌ ಆಯ್ಕೆ ಕೊಲಂಬೊ: ಕ್ರಿಕೆಟ್ ರಂಗದ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಕಳೆದ ವಾರ ಗುಂಪು ಹಂತದ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಮತ್ತು ಬಾಬರ್‌ ಆಜಂ ನಾಯಕತ್ವದ ತಂಡ ಆಡಿದ್ದವು. ಆದರೆ, ಮಳೆ ಬಂದ ಕಾರಣ ಪಂದ್ಯ ಪೂರ್ಣಗೊಳ್ಳದೇ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗಿತ್ತು. ಇದೀಗ ನಾಲ್ಕರ ಘಟ್ಟದಲ್ಲಿ ಭಾರತ ತಂಡವು ತನ್ನ ಪಾಲಿನ ಮೂರು ಪಂದ್ಯಗಳ ಪೈಕಿ ಮೊದಲನೆಯದನ್ನು ಪಾಕ್ ಎದುರು ಆಡಲಿದೆ. ಆದರೆ ಬಾಬರ್‌ ಬಳಗಕ್ಕೆ ಇದು ಎರಡನೇ ಪಂದ್ಯವಾಗಿದೆ. ಮೊದಲನೇ ಪಂದ್ಯದಲ್ಲಿ ಪಾಕ್ ತಂಡವು ಬಾಂಗ್ಲಾದೇಶವನ್ನು ಸೋಲಿಸಿದೆ. ಇಲ್ಲಿ ಗೆದ್ದರೆ ಫೈನಲ್‌ ಹಾದಿ ಸುಗಮ. ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಶಾರ್ದೂಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬೂಮ್ರಾ, ಕೆ.ಎಲ್. ರಾಹುಲ್, ಪಾಕಿಸ್ತಾನ: ಬಾಬರ್ ಆಜಂ (ನಾಯಕ), ಇಮಾಮ್ ಉಲ್ ಹಕ್, ಫಕರ್ ಜಮಾನ್, ಮೊಹಮ್ಮದ್ ರಿಜ್ವಾನ್, ಆಘಾ ಸಲ್ಮಾನ್, ಇಫ್ತಿಕಾರ್ ಅಹಮದ್, ಶಾದಾಬ್ ಖಾನ್, ಫಾಹೀಂ ಅಶ್ರಫ್, ಶಾಹೀನ್ ಆಫ್ರಿದಿ, ನಸೀಮ್ ಷಾ, ಹ್ಯಾರಿಸ್ ರವೂಫ್, ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.