| : ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ಕೊಲಂಬೊ: ಏಷ್ಯಾ ಕಪ್ ಏಕದಿನ ಕ್ರಿಕೆಟ್‌ ಟೂರ್ನಿಯ ಸೂಪರ್ ಫೋರ್ ಹಂತದ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗಿವೆ. ಟಾಸ್‌ ಗೆದ್ದಿರುವ ಪಾಕಿಸ್ತಾನ ಬ್ಯಾಟಿಂಗ್‌ ಆರಂಭಿಸಿದೆ. ಪಂದ್ಯವು ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯವನ್ನು 45 ಓವರ್‌ಗಳಿಗೆ ಇಳಿಸಲಾಗಿದೆ. ಸದ್ಯ 9 ಓವರ್‌ ಮುಗಿದಿದ್ದು, ಪಾಕ್‌ ಪಡೆ 1 ವಿಕೆಟ್‌ ನಷ್ಟಕ್ಕೆ 36 ರನ್ ಗಳಿಸಿದೆ. ಫಖರ್‌ ಜಮಾನ್‌ ಕೇವಲ 4 ರನ್‌ ಗಳಿಸಿ ಔಟಾಗಿದ್ದಾರೆ. ಅಬ್ದುಲ್ಲಾ ಶಫೀಕ್‌ (13) ಮತ್ತು ನಾಯಕ ಬಾಬರ್ ಅಜಂ (18) ಕ್ರೀಸ್‌ನಲ್ಲಿದ್ದಾರೆ. ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇಲ್ಲಿ ಗೆದ್ದ ತಂಡ ಭಾನುವಾರ ನಡೆಯುವ ಫೈನಲ್‌ನಲ್ಲಿ ಭಾರತಕ್ಕೆ ಸವಾಲೊಡ್ಡಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.