T20 | ಭಾರತ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್, ಬೌಲಿಂಗ್ ಆಯ್ಕೆ ಮೌಂಟ್ ಮಾಂಗನೆ: ಭಾರತ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದಿರುವ ನ್ಯೂಜಿಲೆಂಡ್‌ ತಂಡಬೌಲಿಂಗ್ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ಬ್ಯಾಟಿಂಗ್ ಅರಂಭಿಸಿದ ಹಾರ್ದಿಕ್ ಪಾಂಡ್ಯ ಪಡೆ 6.4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 50 ರನ್‌ ಗಳಿಸಿದೆ. ಭಾರತದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರಿಷಬ್ ಪಂತ್ 6 ರನ್ ಗಳಿಸಿ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿದ್ದಾರೆ. ಇಶಾನ್ ಕಿಶನ್ ಔಟಾಗದೆ 28 ಹಾಗೂ ಸೂರ್ಯಕುಮಾರ್ ಯಾದವ್ ಔಟಾಗದೆ 6 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಸದ್ಯ ಮಳೆ ಬಂದಿರುವ ಕಾರಣ ಪಂದ್ಯ ಸ್ಥಗಿತಗೊಂಡಿದೆ. ಎರಡು ದಿನಗಳ ಹಿಂದೆ ವೆಲ್ಲಿಂಗ್ಟನ್‌ನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಆದ್ದರಿಂದ ಇನ್ನುಳಿದ ಎರಡು ಪಂದ್ಯಗಳಲ್ಲಿ ಸರಣಿ ಜಯ ಸಾಧಿಸುವ ಸವಾಲು ಉಭಯ ತಂಡಗಳಿಗೆ ಇದೆ. ಭಾನುವಾರದ ಪಂದ್ಯದಲ್ಲಿ ಗೆದ್ದವರಿಗೆ ಸರಣಿ ಕಿರೀಟ ಒಲಿಸಿಕೊಳ್ಳುವ ಅವಕಾಶ ಹೆಚ್ಚು. ಆದ್ದರಿಂದ ಈ ಪಂದ್ಯ ಮಹತ್ವದ್ದಾಗಲಿದೆ. ತಂಡಗಳು ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಆರ್ಷದೀಪ್ ಸಿಂಗ್. ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ (ವಿಕೆಟ್‌ಕೀಪರ್), ಲಾಕಿ ಫರ್ಗ್ಯುಸನ್, ಡೆರಿಲ್ ಮಿಚೆಲ್, ಆ್ಯಡಂ ಮಿಲ್ನೆ, ಜಿಮ್ಮಿ ನಿಶಾಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟನರ್, ಟಿಮ್ ಸೌಥಿ, ಈಶ್ ಸೌಧಿ 🌧️ , . # 50/1 6.4 . ▶️ ://./mIKkpD4WmZ # ../1GIpQY2d8R . 🏆 ?# ../8l4gPPcVof ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.