ಮಳೆಯಿಂದ ಭಾರತ–ನ್ಯೂಜಿಲೆಂಡ್‌ ಪಂದ್ಯ ವಿಳಂಬ ವೆಲ್ಲಿಂಗ್ಟನ್‌: ಭಾರತ–ನ್ಯೂಜಿಲೆಂಡ್‌ ನಡುವಿನ 3 ಪಂದ್ಯಗಳ ಟಿ–20 ಸರಣಿಯ ಮೊದಲ ಪಂದ್ಯ ಮಳೆಯಿಂದ ವಿಳಂಬಗೊಂಡಿದೆ. ಇಂದು ಸತತವಾಗಿ ತುಂತುರು ಮಳೆ ಸುರಿಯುತ್ತಿದ್ದು ಇದುವರೆಗೂ ಟಾಸ್‌ ಆಗಿಲ್ಲ. ಪ್ರೇಕ್ಷಕರು ತಾಳ್ಮೆಯಿಂದ ಕಾಯುತ್ತಿದ್ದಾರೆ. ನ್ಯೂಜಿಲೆಂಡ್‌ ಪ್ರವಾಸದ ಭಾಗವಾಗಿ ಭಾರತವು 3 ಟಿ–20 ಹಾಗೂ ಹಲವು ಏಕದಿನ ಪಂದ್ಯಗಳನ್ನು ಆಡಲಿದೆ. ಉಭಯ ತಂಡಗಳು ಆಸ್ಟ್ರೇಲಿಯದಲ್ಲಿ ಇತ್ತೀಚೆಗೆ ನಡೆದ ಟಿ–20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಸರಣಿಯಿಂದ ಹೊರಬಿದ್ದಿದ್ದವು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.