ಅತ್ಯಾಚಾರ ಆರೋಪ: ಎಲ್ಲ ಪ್ರಕಾರದ ಕ್ರಿಕೆಟ್‌ಗಳಿಂದ ಧನುಷ್ಕ ಗುಣತಿಲಕ ಅಮಾನತು ಕೊಲಂಬೊ:ಅತ್ಯಾಚಾರದ ಆರೋಪ ಕೇಳಿ ಬಂದಿರುವ ಶ್ರೀಲಂಕಾ ಬ್ಯಾಟರ್ ಧನುಷ್ಕಗುಣತಿಲಕ ಅವರನ್ನು ಕ್ರಿಕೆಟ್‌ನಿಂದ ಅಮಾನತು ಮಾಡಲಾಗಿದೆ. ಎಲ್ಲ ಪ್ರಕಾರದ ಕ್ರಿಕೆಟ್‌ಗಳಿಂದ ಗುಣತಿಲಕ ಅವರನ್ನು ಅಮಾನತು ಮಾಡಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ. ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ ಅವರ ಮೇಲೆ ಅತ್ಯಾಚಾರದ ದೂರು ನೀಡಿದ್ದರು. ರೋಸ್‌ಬೇಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಗುಣತಿಲಕ ಆನ್‌ಲೈನ್ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೊಬ್ಬರ ಸಂಪರ್ಕ ಮಾಡಿದ್ದರು. ಬಳಿಕ ಈ ಘಟನೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 2015 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಗುಣತಿಲಕ, ಪ್ರಸ್ತುತ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಇನ್ನು ಟೂರ್ನಿಯಲ್ಲಿ ಇಂಗ್ಲೆಂಡ್ ಜೊತೆ ಕೊನೆ ಪಂದ್ಯವಾಡಿ ಸೋತು ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾ ತಂಡ ತವರಿಗೆ ಮರಳಿದೆ. ಅತ್ಯಾಚಾರ ಆರೋಪ ಬಂದಿರುವ ಗುಣತಿಲಕ ಅವರನ್ನುಆಸ್ಟ್ರೇಲಿಯಾದಲ್ಲೇ ಬಿಟ್ಟು ಉಳಿದ ಆಟಗಾರರು ಶ್ರೀಲಂಕಾಕ್ಕೆ ತೆರಳಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ. ಮೈಸೂರಿಗೆ ಬಂದ 'ವಂದೇ ಭಾರತ್'ಎಕ್ಸ್ ಪ್ರೆಸ್ ರೈಲು ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.