T20 : | ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಅಡಿಲೇಡ್ ಓವಲ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ಭಾರತ ವಿರುದ್ಧ ನಡೆಯುತ್ತಿರುವ ಎರಡನೇ ಸೆಮಿಪೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಅತ್ತ ಇಂಗ್ಲೆಂಡ್ ತಂಡದಲ್ಲಿಗಾಯದಿಂದಾಗಿ ಡೇವಿಡ್ ಮಲಾನ್ ಹಾಗೂ ಮಾರ್ಕ್ ವುಡ್ ಹೊರಗುಳಿಯುವಂತಾಗಿದೆ. ಅವರಿಬ್ಬರ ಬದಲಿಗೆ ಪಿಲಿಪ್ ಸಾಲ್ಟ್ ಹಾಗೂ ಕ್ರಿಸ್ ಜಾರ್ಡನ್ ತಂಡವನ್ನು ಸೇರಿಕೊಂಡಿದ್ದಾರೆ. ಬುಧವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿದ ಪಾಕಿಸ್ತಾನ, ಫೈನಲ್‌ಗೆ ಪ್ರವೇಶಿಸಿದೆ. ಈಗ ಭಾರತ ಹಾಗೂ ಇಂಗ್ಲೆಂಡ್ ನಡುವಣ ಪಂದ್ಯದಲ್ಲಿ ಗೆದ್ದ ತಂಡವು ಭಾನುವಾರ ಮೆಲ್ಬರ್ನ್‌ನಲ್ಲಿ ನಡೆಯಲಿರುವ ಪ್ರಶಸ್ತಿ ಹಣಾಹಣಿಯಲ್ಲಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ. ಭಾರತ ತಂಡವು 2014ರ ವಿಶ್ವಕಪ್ ಟೂರ್ನಿಯ ನಂತರ ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ಈ ಎರಡೂ ಕನಸುಗಳನ್ನು ನನಸು ಮಾಡಿಕೊಳ್ಳುವ ಅವಕಾಶವಿದೆ. 🚨 & 🚨 # #T20WorldCup -. # ▶️ ://./5t1NQ2iUeJ ' 🔽 ../9aFu6omDko 👑# | #T20WorldCup | # ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.