ಟಿ20 ವಿಶ್ವಕಪ್: ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿದ ನ್ಯೂಜಿಲೆಂಡ್ ಸಿಡ್ನಿ/ಪರ್ತ್:ಶನಿವಾರದಿಂದ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಿದ್ದು ಮೊದಲ ಪಂದ್ಯದಲ್ಲಿಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನುನ್ಯೂಜಿಲೆಂಡ್ ಸೋಲಿಸಿದೆ. ಆಸ್ಟ್ರೇಲಿಯಾ ಆತಿಥ್ಯದಲ್ಲಿಟಿ20 ವಿಶ್ವಕಪ್ ಟೂರ್ನಿ ಆರಂಭವಾಗಿದೆ. ' 2011 🔥#T20WorldCup | # | 📝 : ://./1mYxKgn4aP ../D784MzZbam ಸಿಡ್ನಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನೆ ಪಂದ್ಯದಲ್ಲಿ ಆತಿಥೇಯ ತಂಡವು ನ್ಯೂಜಿಲೆಂಡ್ ಎದುರು ಮುಗ್ಗರಿಸಿತು. ಮೊದಲು ಬ್ಯಾಟ್‌ ಮಾಡಿದನ್ಯೂಜಿಲೆಂಡ್ ತಂಡ 20 ಓವರ್‌ಗಳಲ್ಲಿ 200 ರನ್‌ ಕಲೆ ಹಾಕಿತು. ನ್ಯೂಜಿಲೆಂಡ್‌ ಪರ ಕಾನ್ವೆ ಅಮೋಘ ಬ್ಯಾಟಿಂಗ್‌ ಪ್ರದರ್ಶನ ಮಾಡಿ 92 ರನ್‌ ಗಳಿಸಿದರು. ಆರಂಭಿಕ ಆಟಗಾರ ಫಿನ್‌ ಅಲೇನ್‌ 42 ರನ್‌ ಗಳಿಸಿ ತಂಡಕ್ಕೆ ನೆರವಾದರು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 17 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 111 ರನ್‌ ಗಳಿಸಿ ಸೋಲು ಒಪ್ಪಿಕೊಂಡಿತು.ಆಸ್ಟ್ರೇಲಿಯಾ ಪರವಾಗಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ಕಾಣಲಿಲ್ಲ. ಮ್ಯಾಕ್ಸ್‌ವೆಲ್‌ 28, ಕಮ್ಮಿನ್ಸ್‌ 21 ರನ್‌ ಗಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.