ಟಿ20 ವಿಶ್ವಕಪ್ ಕ್ರಿಕೆಟ್ ಇಂದಿನಿಂದ ಸಿಡ್ನಿ/ಪರ್ತ್: ಹಾಲಿ ಚಾಂಪಿಯನ್ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಶನಿವಾರದಿಂದ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತ ಆರಂಭವಾಗಲಿದೆ. ಸಿಡ್ನಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನೆ ಪಂದ್ಯದಲ್ಲಿ ಆತಿಥೇಯ ತಂಡವು ನ್ಯೂಜಿಲೆಂಡ್ ಎದುರು ಸೆಣಸಲಿದೆ. ಇದೇ ದಿನ ಪರ್ತ್‌ನಲ್ಲಿ ನಡೆಯುವ ಇನ್ನೊಂದು ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಅಫ್ಗಾನಿಸ್ತಾನ ಮುಖಾಮುಖಿಯಾಗಲಿವೆ. ಅ.17ರಿಂದ ಆರಂಭವಾಗಿದ್ದ ಅರ್ಹತಾ ಸುತ್ತಿನಲ್ಲಿ ಪ್ರಮುಖ ತಂಡವಾದ ವೆಸ್ಟ್ ಇಂಡೀಸ್ ನಿರಾಶೆ ಅನುಭವಿಸಿದೆ. ಜಿಂಬಾಬ್ವೆ ಇದೇ ಮೊದಲ ಬಾರಿಗೆ ಮುಖ್ಯಸುತ್ತಿಗೆ ಪ್ರವೇಶಿಸಿದೆ. ಒಟ್ಟು ಏಳು ನಗರಗಳಲ್ಲಿ ಒಟ್ಟು 33 ಪಂದ್ಯಗಳು ನಡೆಯಲಿವೆ. ಭಾರತ ತಂಡವು ಭಾನುವಾರ ನಡೆಯಲಿರುವ ಪಾಕಿಸ್ತಾನ ಎದುರಿನ ಪಂದ್ಯದೊಂದಿಗೆ ತನ್ನ ಅಭಿಯಾನ ಆರಂಭಿಸಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.