ಕ್ರಿಕೆಟ್: ಬೂಮ್ರಾ ಬದಲಿಗೆ ಸಿರಾಜ್‌ಗೆ ಸ್ಥಾನ ನವದೆಹಲಿ: ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ದಕ್ಷಿಣ ಆಫ್ರಿಕಾ ಎದುರಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಆಡುತ್ತಿರುವ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಬೆನ್ನುನೋವಿನಿಂದಾಗಿ ಹೊರಬಿದ್ದಿರುವ ಜಸ್‌ಪ್ರೀತ್ ಬೂಮ್ರಾ ಅವರ ಸ್ಥಾನಕ್ಕೆ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ‘ದಕ್ಷಿಣ ಆಫ್ರಿಕಾ ಎದುರು ಉಳಿದಿರುವ ಇನ್ನೆರಡು ಟಿ20 ಪಂದ್ಯಗಳಿಗೆ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆ ಸಮಿತಿಯು ಈ ನಿರ್ಣಯ ಕೈಗೊಂಡಿದೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಬೂಮ್ರಾ ಅವರಿಗೆ ತೀವ್ರ ಬೆನ್ನುನೋವಿರುವುದರಿಂದ ಆರು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರ ತಂಡವು ಸಲಹೆ ನೀಡಿದೆ. ಇದರಿಂದಾಗಿ ಬೂಮ್ರಾ ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅವರು ಆಡುತ್ತಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.