: ಗೆದ್ದವರಿಗೆ ಟ್ರೋಫಿ; ಭಾರತ ಫೀಲ್ಡಿಂಗ್, ಪಂತ್ ಔಟ್ ಹೈದರಾಬಾದ್: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. 1-1ರ ಸಮಬಲ ಸಾಧಿಸಿರುವ ಹಿನ್ನೆಲೆಯಲ್ಲಿ ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡಕ್ಕೆ ಸರಣಿ ಪಾಲಾಗಲಿದೆ. ಅಂತಿಮ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ತರಲಾಗಿದ್ದು, ಬಲಗೈ ವೇಗದ ಬೌಲರ್ ಭುವನೇಶ್ವರ್ ಕುಮಾರ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಭುವಿ ಅವರಿಗಾಗಿ ರಿಷಭ್ ಪಂತ್ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ. 🚨 🚨# # T20I. ▶️ ://./xVrzo737YV ../ ಅತ್ತ ಆಸ್ಟ್ರೇಲಿಯಾ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಸೀನ್ ಅಬಾಟ್ ಸ್ಥಾನದಲ್ಲಿ ಜೋಶ್ ಇಂಗ್ಲಿಸ್ ಕಾಣಿಸಿಕೊಂಡಿದ್ದಾರೆ. ಭಾರತದ ಪ್ಲೇಯಿಂಗ್ ಇಲೆವೆನ್ ಇಂತಿದೆ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬೂಮ್ರಾ, ಯಜುವೇಂದ್ರ ಚಾಹಲ್. 🚨 🚨 1️⃣ # @ . ' # T20I . ▶️ ://./xVrzo737YV 🔽 ../3fbgGjK3vu ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.