T20I : ಬಾಬರ್ ಹಿಂದಿಕ್ಕಿದ ಸೂರ್ಯಕುಮಾರ್‌ಗೆ 3ನೇ ಸ್ಥಾನ ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿದ ತಾಜಾ ಟ್ವೆಂಟಿ-20 ಬ್ಯಾಟಿಂಗ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಂ ಹಿಂದಿಕ್ಕಿರುವ ಭಾರತದ ಸೂರ್ಯಕುಮಾರ್ ಯಾದವ್ ಮೂರನೇ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವುದು ಸೂರ್ಯಕುಮಾರ್‌ಗೆ ಬಡ್ತಿ ಸಿಗಲು ನೆರವಾಗಿದೆ. ಇದನ್ನೂ ಓದಿ:ಟೀಮ್ ಇಂಡಿಯಾದಲ್ಲಿ ಬೂಮ್ರಾ ಅನುಪಸ್ಥಿತಿ ಕಾಡುತ್ತಿದೆ: ಹಾರ್ದಿಕ್ ಪಾಂಡ್ಯ ಸೂರ್ಯಕುಮಾರ್ ಯಾದವ್ ಮೂರು (780 ರೇಟಿಂಗ್ ಪಾಯಿಂಟ್) ಹಾಗೂ ಬಾಬರ್ ಆಜಂ (771) ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ವಿಭಾಗವನ್ನು ಪಾಕಿಸ್ತಾನದವರೇ ಆದ ಮೊಹಮ್ಮದ್ ರಿಜ್ವಾನ್ (825) ಮುನ್ನಡೆಸುತ್ತಿದ್ದು, ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕರಮ್ (792) ದ್ವಿತೀಯ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 14 ಹಾಗೂ ವಿರಾಟ್ ಕೊಹ್ಲಿ 16ನೇ ಸ್ಥಾನದಲ್ಲಿದ್ದಾರೆ. ಈ ಪೈಕಿ ಕೊಹ್ಲಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಆಸೀಸ್ ವಿರುದ್ಧ ಕೇವಲ 30 ಎಸೆತಗಳಲ್ಲಿ ಅಜೇಯ 70 ರನ್ ಗಳಿಸಿರುವ ಹಾರ್ದಿಕ್ ಪಾಂಡ್ಯ 23 ಸ್ಥಾನಗಳ ಬಡ್ತಿ ಪಡೆದು 65ಕ್ಕೆ ತಲುಪಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.