ಭಾರತ ಪಾಕಿಸ್ತಾನ ಪಂದ್ಯಕ್ಕೆ ಮಾತ್ರ ಮೀಸಲು ದಿನ ಏಕೆ? ಅಭಿಮಾನಿಗಳ ಆಕ್ರೋಶ ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೂಪರ್ 4 ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಸೆಪ್ಟೆಂಬರ್ 10ರಂದು ನಡೆಯಲಿರುವ ಪಂದ್ಯಕ್ಕೆ ಮಳೆಯ ಭೀತಿ ಕಾಡುತ್ತಿದೆ. ಈ ನಡುವೆ ಭಾರತ ಹಾಗೂ ಪಾಕಿಸ್ತಾನ ನಡುವಣ ಸೂಪರ್ 4 ಪಂದ್ಯಕ್ಕೆ ಮೀಸಲು ದಿನ ನಿಗದಿಪಡಿಸಲು ಏಷ್ಯಾ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಇದರಂತೆ ಪ್ರತಿಕೂಲ ಹವಾಮಾನದಿಂದಾಗಿ ಪಂದ್ಯ ಸ್ಥಗಿತಗೊಂಡರೆ, ಸೆಪ್ಟೆಂಬರ್ 11ರಂದು ಪಂದ್ಯ ಮುಂದುವರಿಯಲಿದೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಮಾತ್ರ ಮೀಸಲು ದಿನ ನಿಗದಿಪಡಿಸಿರುವುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಯೋಜಕರು, ಪ್ರಸಾರಕರು ಜಾಹೀರಾತು ದೃಷ್ಟಿಕೋನದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ. ಈ ಮೂಲಕ ಶ್ರೀಲಂಕಾ ಹಾಗೂ ಬಾಂಗ್ಲಾದೇಶಕ್ಕೆ ಅವಮಾನ ಮಾಡಲಾಗಿದೆ ಎಂದು ಸೈಫ್ ಅಹ್ಮದ್ ಎಂಬವರು ಕಮೆಂಟ್ ಮಾಡಿದ್ದಾರೆ. & 10th . , . - … ಈ ತಾರತಮ್ಯ ಧೋರಣೆಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೇಗೆ ಅನುಮೋದನೆ ನೀಡುತ್ತದೆ ಎಂದು ಪೃಥ್ವಿ ಎಂಬವರು ಪ್ರಶ್ನಿಸಿದ್ದಾರೆ. 2 . 2 ! ಏಷ್ಯಾ ಕ್ರಿಕೆಟ್ ಮಂಡಳಿ (ಎಸಿಸಿ), ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿರುದ್ದ ವಾಗ್ದಾಳಿ ಮಾಡಿರುವ ವಿಶೇಷ್ ರಾಯ್ ಎಂಬವರು, ಭಾರತ ಅಥವಾ ಪಾಕಿಸ್ತಾನ ಹಾಲಿ ಚಾಂಪಿಯನ್ ಆಗಿರದ ಹೊರತಾಗಿಯೂ ಮೀಸಲು ದಿನ ಕಲ್ಪಿಸಲಾಗಿದೆ. ಈ ತಂಡಗಳಿಗೆ ಮಾತ್ರ ವಿಶೇಷ ಸವಲತ್ತು ಏಕೆ ಎಂದು ಪ್ರಶ್ನಿಸಿದ್ದಾರೆ. , #AsiaCup2023. # , '? , ? # ಭಾರತ ಹಾಗೂ ಪಾಕಿಸ್ತಾನ ನಡುವಣ ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.