T20 2022: ಭಾರತ ಪಾಕಿಸ್ತಾನ ಪಂದ್ಯದ ಟಿಕೆಟ್ ಸೋಲ್ಡ್ ಔಟ್ ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯದ ಎಲ್ಲ ಟಿಕೆಟ್‌ಗಳು ಮಾರಾಟವಾಗಿವೆ. ಈ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ. ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯವು ಅಕ್ಟೋಬರ್ 23ರಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಇದನ್ನೂ ಓದಿ:ಕೂಲಿಂಗ್ ಆಫ್‌ ತಿದ್ದುಪಡಿಗೆ ಸುಪ್ರೀಂ ಹಸಿರುನಿಶಾನೆ: ಗಂಗೂಲಿ, ಜಯ್ ಶಾ ನಿರಾಳ ಚುಟುಕು ವಿಶ್ವಕಪ್‌ಗಾಗಿ ಎಲ್ಲ ವಯಸ್ಸಿನ ಅಭಿಮಾನಿಗಳನ್ನು ಸ್ವಾಗತಿಸಲು ಸಿದ್ಧವಾಗಿದ್ದು, ಪ್ರತಿಷ್ಠಿತ ಟೂರ್ನಿ ಆರಂಭವಾಗುವ ಒಂದು ತಿಂಗಳ ಮುನ್ನವೇ 5 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ. ಒಟ್ಟು 82 ದೇಶಗಳ ಅಭಿಮಾನಿಗಳು ಟಿಕೆಟ್ ಖರೀದಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.