2023 | : ಆಸ್ಟ್ರೇಲಿಯಾ ಕಟ್ಟಿಹಾಕಿದ ಭಾರತ ತಂಡ ಚೆನ್ನೈ: ಭಾರತ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ, ಅವರ ನಿರ್ಧಾರ ಅವರಿಗೆ ಆರಂಭದಲ್ಲಿ ಆಘಾತ ನೀಡಿದೆ. ಇತ್ತೀಚಿನ ವರದಿಗಳ ಪ್ರಕಾರ ಆಸ್ಟ್ರೇಲಿಯಾ ತಂಡ 30 ಓವರ್‌ಗಳಲ್ಲಿ ತನ್ನ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 119 ರನ್‌ಗಳನ್ನು ಕಲೆ ಹಾಕಿದೆ. ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ದಾಳಿಗೆ ಆಸ್ಟ್ರೇಲಿಯಾ ತತ್ತರಿಸಿದೆ. ಅವರು ಪ್ರಮುಖ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಡೇವಿಡ್ ವಾರ್ನರ್ 42 ಉತ್ತಮ ರನ್ ಗಳಿಸಿದರೇ ಮಿಚಲ್ ಮಾರ್ಷ್ ಶೂನ್ಯ ಸುತ್ತಿ ನಿರ್ಗಮಿಸಿದರು. ಸ್ಟೀವ್ ಸ್ಮಿತ್ 46 ಗಳಿಸಿದರೆ ಮಾರ್ನುಸ್ 27 ರನ್ ಗಳಿಸಿದರು. ಅಲೆಕ್ಸ್ ಕೇರಿ ಕೂಡ ಶೂನ್ಯ ಸುತ್ತಿ ನಡೆದರು. ಸದ್ಯ ಮ್ಯಾಕ್ಸವೆಲ್ ಮತ್ತು ಕ್ಯಾಮರೂನ್ ಗ್ರೀನ್ ಜೊತೆಯಾಟ ಆಡುತ್ತಿದ್ದಾರೆ. ಇಶಾನ್, ಅಶ್ವಿನ್‌ಗೆ ಸ್ಥಾನ... ಭಾರತ ತಂಡದಲ್ಲಿ ಜ್ವರದಿಂದ ಬಳಲುತ್ತಿರುವ ಶುಭಮನ್ ಗಿಲ್ ಸ್ಥಾನಕ್ಕೆ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಅತ್ತ ರವಿಚಂದ್ರನ್ ಅಶ್ವಿನ್ ಸಹ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಶಾರ್ದೂಲ್ ಠಾಕೂರ್ ಅವಕಾಶ ವಂಚಿತರಾಗಿದ್ದಾರೆ. # 👌# | #CWC23 | @ ../in57YDYnv3 ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್. ಆಸ್ಟ್ರೇಲಿಯಾ ತಂಡ ಇಂತಿದೆ: ಡೇವಿಡ್ ವಾರ್ನರ್, ಮಿಷೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಲ್ ಲಾಬುಷೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಶ್ ಹ್ಯಾಜಲ್‌ವುಡ್. 🚨 🚨 . ▶️ ://./ToKaGif9ri#CWC23 | # | # ../3BxcFfqWnX ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.