: ಪಾಕ್ ವಿರುದ್ಧ ಟಾಸ್ ಗೆದ್ದ ನೆದರ್ಲೆಂಡ್ಸ್, ಬೌಲಿಂಗ್ ಆಯ್ಕೆ ಹೈದರಾಬಾದ್: ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು (ಶುಕ್ರವಾರ) ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ನೆದರ್ಲೆಂಡ್ಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಸದ್ಯ ಬ್ಯಾಟಿಂಗ್ ಆರಂಭಿಸಿರುವ ಪಾಕ್ 10 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 42 ರನ್ ಗಳಿಸಿದೆ. ಇಮಾಮ್ ಉಲ್ ಹಕ್ 15, ಫಕಾರ್ ಜಮಾನ್ 12, ಬಾಬರ್ ಆಜಂ 5 ರನ್ ಗಳಿಸಿ ಔಟಾಗಿದ್ದಾರೆ. ಸಾದ್ ಶಕೀಲ್ ಹಾಗೂ ಮೊಹಮ್ಮದ್ ರಿಜ್ವಾನ್ ಕ್ರೀಸ್‌ನಲ್ಲಿದ್ದಾರೆ. ತಂಡಗಳು: ಪಾಕಿಸ್ತಾನ: ಬಾಬರ್ ಆಜಂ (ನಾಯಕ), ಇಮಾಮ್ ಉಲ್ ಹಕ್, ಫಕಾರ್ ಜಮಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್‌ಕೀಪರ್‌), ಸಾದ್ ಶಕೀಲ್, ಇಫ್ತಿಕಾರ್ ಅಹಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಆಫ್ರಿದಿ, ಹ್ಯಾರಿಸ್ ರವೂಫ್ ನೆದರ್ಲೆಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ವಿಕೆಟ್‌ ಕೀಪರ್–ನಾಯಕ), ವಿಕ್ರಮಜೀತ್ ಸಿಂಗ್, ಮ್ಯಾಕ್ಸ್ ಒಡೊವ್ಡ್, ಬಾಸ್ ಡಿ ಲೀಡ್, ತೇಜಾ ನಿಡಮಾನೂರು, ಸಕೀಬ್ ಝಲ್ಪಿಕರ್, ಲೊಗಾನ್ ವ್ಯಾನ್ ಬೀಕ್, ರೋಲಾಫ್ ವ್ಯಾನ್ ಡೆರ್ ಮರ್ವೆ, ಆರ್ಯನ್ ದತ್, ಪಾಲ್ ವ್ಯಾನ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.