ಸಾಮಾಜಿಕ ಮಾಧ್ಯಮಗಳಿಂದ ಸಾವಿರಾರು ಕೋಟಿ ಗಳಿಕೆ: ವಿರಾಟ್ ಕೊಹ್ಲಿ ಸ್ಪಷ್ಟನೆ ಮುಂಬೈ: ಸಾಮಾಜಿಕ ಮಾಧ್ಯಮಗಳ ಗಳಿಕೆಯ ಕುರಿತು ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ, ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ. ಸಾಮಾಜಿಕ ಮಾಧ್ಯಮಗಳಿಂದ ಕೊಹ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸುತ್ತಾರೆ. ಇನ್‌ಸ್ಟಾಗ್ರಾಂನಲ್ಲಿ ಹಾಕುವ ಒಂದೇ ಒಂದು ಪೋಸ್ಟ್‌ಗೆ ಸುಮಾರು ₹9ರಿಂದ ₹15 ಕೋಟಿ ಪಡೆಯುತ್ತಾರೆ ಎಂಬೆಲ್ಲ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡಿತ್ತು. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೊಹ್ಲಿ ಇದು ಸತ್ಯಕ್ಕೆ ದೂರವಾಗಿದೆ ಎಂದಿದ್ದಾರೆ. ‘ನನ್ನ ಜೀವನದಲ್ಲಿ ಏನು ಗಳಿಸಿದ್ದೇನು ಅದಕ್ಕೆ ನಾನು ಕೃತಜ್ಞನಾಗಿದ್ದೇನೆ ಮತ್ತು ಋಣಿಯಾಗಿದ್ದೇನೆ. ಸಾಮಾಜಿಕ ಮಾಧ್ಯಮಗಳ ಗಳಿಕೆಯ ಬಗ್ಗೆ ನನ್ನ ಸುತ್ತ ಸುತ್ತುತ್ತಿರುವ ಸುದ್ದಿ ನಿಜವಲ್ಲ’ ಎಂದು ಹೇಳಿದ್ದಾರೆ. ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ–20 ಅಂತರರಾಷ್ಟ್ರೀಯ ಪಂದ್ಯದಿಂದ ವಿರಾಮ ಪಡೆದಿರುವ ಕೊಹ್ಲಿ, ಮುಂಬರುವ ಏಷ್ಯಾ ಕಪ್‌ ಟೂರ್ನಿಗೆ ತಯಾರಿ ನಡೆಸುತ್ತಿದ್ದಾರೆ. ’ , . 🙏 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.