ಅಂತರ ವಿವಿ ನೆಟ್‌ಬಾಲ್ 14ರಿಂದ ಬೆಂಗಳೂರು: ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಪುರುಷರ ನೆಟ್‌ಬಾಲ್ ಚಾಂಪಿಯನ್‌ಷಿಪ್‌ ಇದೇ 14ರಿಂದ 17ರವರೆಗೆ ನಡೆಯಲಿದೆ. ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜು ಹಾಗೂ ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಟೂರ್ನಿ ನಡೆಯಲಿದೆ. ‘ನಾಗಸಂದ್ರದ ಸಿಡೇದ ಹಳ್ಳಿಯಲ್ಲಿರುವ ಸೌಂದರ್ಯ ಕಾನೂನು ಕಾಲೇಜು ಮೈದಾನದಲ್ಲಿ ಟೂರ್ನಿ ನಡೆಯಲಿದೆ. ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ 74 ವಿಶ್ವವಿದ್ಯಾಲಯಗಳ ತಂಡಗಳು ಸ್ಪರ್ಧಿಸಲಿವೆ’ ಎಂದು ಸೌಂದರ್ಯ ಎಜುಕೇಷನಲ್ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಕೀರ್ತನ್‌ ಕುಮಾರ್ ಶುಕ್ರವಾರ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ‘ಟೂರ್ನಿಯು ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಸುಮಾರು 1200ಕ್ಕೂ ಹೆಚ್ಚು ಸ್ಪರ್ಧಿಗಳು ಕಣಕ್ಕಿಳಿಯಲಿದ್ದಾರೆ’ ಎಂದರು. ಈ ಸಂದರ್ಭದಲ್ಲಿ ಸೌಂದರ್ಯ ಕಾನೂನು ಕಾಲೇಜಿನ ಪ್ರಾಂಶುಪಾಲ ಬಿ.ಪಿ. ಮಹೇಶ್, ದೈಹಿಕ ಶಿಕ್ಷಕ ಹರೀಶ್, ನೆಟ್‌ ಬಾಲ್‌ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಇದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.