2023 : ಭಾರತದ ಗೆಲುವಿಗೆ 231 ರನ್ ಗುರಿ ನೀಡಿದ ನೇಪಾಳ ಪಲೇಕೆಲೆ (ಶ್ರೀಲಂಕಾ): ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ ಮತ್ತು ನೇಪಾಳ ತಂಡಗಳು ಗೆಲುವಿಗಾಗಿ ಸೆಣಸಾಟ ನಡೆಸುತ್ತಿವೆ. ಪಲೇಕೆಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ 48.2 ಓವರ್‌ಗಳಲ್ಲಿ 230 ರನ್ ಗಳಿಸಿ ಆಲೌಟ್ ಆಯಿತು. ನೇಪಾಳ ಪರ ಆಸಿಫ್ ಶೇಖ್ 58, ಸೋಂಪಾಲ್ ಕಾಮಿ 48, ಕುಶಾಲ್ ಭುರ್ಟೆಲ್ 38, ದೀಪೇಂದ್ರ ಸಿಂಗ್ ಐರಿ 29, ಗುಲ್ಸನ್ ಝಾ 23 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಟೀಮ್ ಇಂಡಿಯಾ ಪರ ರವೀಂದ್ರ ಜಡೇಜ, ಮೊಹಮ್ಮದ್ ಸಿರಾಜ್ ತಲಾ ಮೂರು ವಿಕೆಟ್ ಪಡೆದರೆ, ಮೊಹ್ಮಮದ್ ಶಮಿ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು. ! # 👌 👌 3️⃣ @ & @ 1️⃣ @MdShami11, @hardikpandya7 & @ 👍 👍 ▶️ ://./i1KYESEf5t #AsiaCup2023 | # ../TcbYFMj2lh ಓದಿ... : ಕ್ಯಾಚ್ ಕೈಚೆಲ್ಲಿದ ಶ್ರೇಯಸ್ -ಕಿಶನ್, ಡ್ಯಾನ್ಸ್ ಮಾಡಿದ ಕೊಹ್ಲಿ! ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.