ಐಬಿಎಸ್‌ಎ ವಿಶ್ವ ಕ್ರೀಡಾಕೂಟ: ಭಾರತ ಮಹಿಳಾ ತಂಡಕ್ಕೆ ಚಿನ್ನ ಬರ್ಮಿಂಗ್‌ಹ್ಯಾಮ್: ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡವು ಶನಿವಾರ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ಚಾರಿತ್ರಿಕ ಸಾಧನೆ ಮಾಡಿತು. ಕರ್ನಾಟಕದ ಆಟಗಾರ್ತಿ ವರ್ಷಾ ಉಮಾಪತಿ ನಾಯಕತ್ವದ ಭಾರತ ತಂಡವು ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳಿಂದ ಜಯಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 114 ರನ್ ಗಳಿಸಿತು. ಮಳೆ ಸುರಿದ ಕಾರಣ ಗೆಲುವಿನ ಗುರಿಯನ್ನು ಪರಿಷ್ಕರಿಸಲಾಯಿತು. 3.3 ಓವರ್‌ಗಳಲ್ಲಿ 42 ರನ್‌ಗಳ ಗುರಿ ಸಾಧಿಸಿದ ಭಾರತ ತಂಡವು ಜಯಭೇರಿ ಬಾರಿಸಿತು. ವಿಶ್ವ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಅಂಧರ ಕ್ರಿಕೆಟ್ ಆಡಿಸಲಾಯಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.