ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಹೀತ್ ಸ್ಟ್ರೀಕ್‌ ನಿಧನ ಸುದ್ದಿ ಸುಳ್ಳು: ಒಲಂಗಾ ಬೆಂಗಳೂರು: ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಹೀತ್ ಸ್ಟ್ರೀಕ್ ನಿಧನರಾಗಿಲ್ಲ ಎಂದು ವರದಿಗಳು ತಿಳಿಸಿವೆ. ಅಂತರರಾಷ್ಟ್ರೀಯ ಮಾಧ್ಯಮಗಳು ಹೀತ್ ಸ್ಟ್ರೀಕ್ ನಿಧನರಾಗಿದ್ದಾರೆ ಎಂದು ವರದಿ ಮಾಡಿದ್ದವು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದಕ್ಷಿಣ ಆಫ್ರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಹೀತ್ ಸ್ಟ್ರೀಕ್ ಜಿಂಬಾಬ್ವೆ ಪರ 65 ಟೆಸ್ಟ್, 189 ಏಕದಿನ ಪಂದ್ಯಗಳನ್ನು ಆಡಿದ್ದರು. ಈ ಎರಡು ಮಾದರಿಯಲ್ಲಿ ಅವರು 4,933 ರನ್ ಹಾಗೂ 455 ವಿಕೆಟ್ ಪಡೆದಿದ್ದರು. ಈ ಹಿಂದೆ ಬಾಂಗ್ಲಾದೇಶ ಕ್ರಿಕೆಟ್ ತಂಡದ ತರಬೇತುದಾರರಾಗಿಯೂ ಹೀತ್ ಸ್ಟ್ರೀಕ್ ಕೆಲಸ ಮಾಡಿದ್ದರು. . . . . ../LQs6bcjWSB ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಹೆನ್ರಿ ಒಲಂಗಾ ಈ ಕುರಿತು ಸ್ಪಷ್ಟನೆ ನೀಡಿದ್ದು, ಹೀತ್ ಸ್ಟ್ರೀಕ್ ನಿಧನ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.