: ಅಫ್ಗಾನ್ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಫ್ಗಾನಿಸ್ತಾನ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲು ಪೀಲ್ಡಿಂಗ್ ಆಯ್ದುಕೊಂಡಿದೆ. ತಾಜಾ ವರದಿಗಳ ವೇಳೆಗೆ ಅಫ್ಗಾನಿಸ್ತಾನ ನಾಲ್ಕು ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 25 ರನ್ ಗಳಿಸಿದೆ. ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವು ಈ ಟೂರ್ನಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಆಘಾತ ಅನುಭವಿಸಿತ್ತು. ಆದರೆ ತನ್ನ ಎರಡನೇ ಪಂದ್ಯದಲ್ಲಿ ಪುಟಿದೆದ್ದ ಬಟ್ಲರ್ ಬಳಗವು ಬಾಂಗ್ಲಾದೇಶ ಎದುರು 137 ರನ್‌ಗಳ ಜಯ ಸಾಧಿಸಿತ್ತು. ಇದರಿಂದಾಗಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ತಂಡವು ಅಫ್ಗಾನಿಸ್ತಾನದ ಎದುರು ಸುಲಭ ಗೆಲುವಿನ ನಿರೀಕ್ಷೆಯಲ್ಲಿದೆ. ಅಲ್ಲದೇ ತನ್ನ ನೆಟ್‌ ರೆನ್‌ರೇಟ್ ಕೂಡ ಉತ್ತಮಪಡಿಸಿಕೊಳ್ಳುವತ್ತಲೂ ಚಿತ್ತ ನೆಟ್ಟಿದೆ. ಮತ್ತೊಂದೆಡೆ ಮೊದಲೆರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಅಫ್ಗಾನಿಸ್ತಾನ ಟೂರ್ನಿಯಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ತಂಡದ ಎಲ್ಲ ವಿಭಾಗಗಳಲ್ಲಿಯೂ ಸುಧಾರಣೆಯ ಅಗತ್ಯವಿದೆ. , ? 👀#CWC23 | # ../QU3oYZGqKg ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.