ವಿರಾಟ್‌ ಕೊಹ್ಲಿ ಇನ್‌ಸ್ಟಾಗ್ರಾಮ್ ಪೋಸ್ಟ್‌ ಮೌಲ್ಯ ₹11.45 ಕೋಟಿ! ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮಾಡುವ ಪ್ರತಿಯೊಂದು ಪ್ರಾಯೋಜಿತ ಪೋಸ್ಟ್‌ಗೆ ₹ 11.45 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಕೊಹ್ಲಿ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ 25 ಕೋಟಿಗೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಪ್ರತಿ ಪೋಸ್ಟ್‌ಗೆ ₹ 26.75 ಕೋಟಿ ಪಡೆಯುವ ಪೋರ್ಚುಗಲ್‌ ಫುಟ್‌ಬಾಲ್‌ ತಂಡದ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಅತಿಹೆಚ್ಚು ಸಂಭಾವನೆ ಪಡೆಯುವವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ₹ 21.49 ಕೋಟಿ ಪಡೆಯುವ ಅರ್ಜೆಂಟೀನಾ ಫುಟ್‌ಬಾಲ್‌ ತಂಡದ ಆಟಗಾರ ಲಯೊನೆಲ್‌ ಮೆಸ್ಸಿ ಎರಡನೇ ಸ್ಥಾನದಲ್ಲಿದ್ದಾರೆ. ಓದಿ... ಸಾಮಾಜಿಕ ಮಾಧ್ಯಮಗಳಿಂದ ಸಾವಿರಾರು ಕೋಟಿ ಗಳಿಕೆ: ವಿರಾಟ್ ಕೊಹ್ಲಿ ಸ್ಪಷ್ಟನೆ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.