2023 | ಅಫ್ಗಾನಿಸ್ತಾನ ಎದುರು ಭಾರತಕ್ಕೆ 8 ವಿಕೆಟ್‌ಗಳ ಜಯ ನವದೆಹಲಿ: ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್ ಪಂದ್ಯದಲ್ಲಿ ಅಫ್ಗಾನಿಸ್ತಾನ ತಂಡದ ವಿರುದ್ಧ ಆತಿಥೇಯ ಭಾರತ 8 ವಿಕೆಟ್‌ಗಳ ಜಯ ದಾಖಲಿಸಿತು. ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ ಮಾಡಿದ ಅಫ್ಗಾನಿಸ್ತಾನ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 272 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಭಾರತ 35 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗುರಿ ಮುಟ್ಟಿತು. CWC2023. 8 () ://./Oj9O7Gq852 # #CWC23 ಇನಿಂಗ್ಸ್‌ ಆರಂಭಿಸಿದ ಅಫ್ಗಾನಿಸ್ತಾನ ಪರ ಆರಂಭಿಕ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಆದರೆ, ಮಧ್ಯಮ ಕ್ರಮಾಂಕದ ಹಷ್ಮತ್‌ಉಲ್ಲಾ ಶಾಹಿದಿ ಹಾಗೂ ಅಜ್ಮತ್‌ಉಲ್ಲಾ ಒಮರ್‌ಝೈ ಅವರು ತಮ್ಮ ತಂಡದ ಇನಿಂಗ್ಸ್‌ಗೆ ಬಲ ತುಂಬಿದರು. ಶಾಹಿದಿ 88 ಎಸೆತಗಳಲ್ಲಿ 80 ರನ್‌ ಗಳಿಸಿದರೆ, ಒಮರ್‌ಝೈ 69 ಎಸೆತಗಳಲ್ಲಿ 62 ರನ್ ಬಾರಿಸಿದರು. ಹೀಗಾಗಿ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು. ಜಸ್‌ಪ್ರಿತ್‌ ಬೂಮ್ರಾ 39 ರನ್‌ ನೀಡಿ 4 ವಿಕೆಟ್‌ ಪಡೆದರೆ, ಹಾರ್ದಿಕ್‌ ಪಾಂಡ್ಯ 2 ವಿಕೆಟ್‌ ಕಿತ್ತರು. ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್‌ ಹಂಚಿಕೊಂಡರು. ಭಾರತದ ರೋಹಿತ್‌ ಶರ್ಮಾ ಆಕರ್ಷಕ ಶತಕ ಸಿಡಿಸಿದರು. ಇಶನ್‌ ಕಿಶನ್‌ 47, ರೋಹಿತ್‌ ಶರ್ಮಾ 131 ರನ್‌ ಗಳಿಸಿ ಔಟಾದರು. ವಿರಾಟ್‌ ಕೊಹ್ಲಿ 55, ಅಯ್ಯರ್‌ 25 ರನ್‌ ಗಳಿಸಿ ಅಜೇಯರಾಗಿ ಉಳಿದರು. ಅಫ್ಗಾನಿಸ್ತಾನ ಪರ ರಶೀದ್‌ ಖಾನ್‌ ಎರಡು ವಿಕೆಟ್‌ ಪಡೆದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.