' T20I : ಅಗ್ರ 10ರಲ್ಲಿ ಹರ್ಮನ್‌ಪ್ರೀತ್ ಕೌರ್‌ಗೆ ಸ್ಥಾನ ದುಬೈ: ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಮಂಗಳವಾರ ‍ಪ್ರಟಕಗೊಂಡ ಐಸಿಸಿ ಮಹಿಳಾ ಟಿ20 ರ‍್ಯಾಂಕಿಂಗ್‌ನಲ್ಲಿ ಬ್ಯಾಟರ್‌ಗಳ ಪಟ್ಟಿಯಲ್ಲಿ 10ರಲ್ಲಿ ಸ್ಥಾನ ಪಡೆದಿದ್ದಾರೆ. ಬಾಂಗ್ಲಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೌರ್‌ 35 ಎಸೆತಗಳಲ್ಲಿ ಔಟಾಗದೆ 54ರನ್‌ ಗಳಿಸಿ, ರ‍್ಯಾಂಕಿಂಗ್‌ನಲ್ಲಿ ನಾಲ್ಕು ಸ್ಥಾನಗಳ ಬಡ್ತಿಯನ್ನು ‍‍ಪಡೆದು ಅಗ್ರ 10ರೊಳಗೆ ಕಾಣಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ತಹ್ಲಿಯಾ ಮೆಕ್‌ಗ್ರಾತ್ 784 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಅವರ ಸಹ ಆಟಗಾರ್ತಿ ಬೆತ್ ಮೂನಿ (777) ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ಸ್ಮೃತಿ ಮಂದಾನ (728) 3ನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಸೋಫಿ ಡಿವೈನ್ (683) ಮತ್ತು ಸುಜಿ ಬೇಟ್ಸ್ (677) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ. ಭಾರತದ ದೀಪ್ತಿ ಶರ್ಮಾ 733 ರೇಟಿಂಗ್‌ ಪಾಯಿಂಟ್‌ನೊಂದಿಗೆ ಬೌಲಿಂಗ್‌ ವಿಭಾಗದಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ (788), ದಕ್ಷಿಣ ಆಫ್ರಿಕಾದ ನೊಂಕುಲುಲೆಕೊ ಮ್ಲಾಬಾ (746) ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.