ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಈಡನ್ ಗಾರ್ಡನ್ ಟಿಕೆಟ್ ಬೆಲೆ ಪ್ರಕಟ ಕೋಲ್ಕತ್ತ: ಈಡನ್‌ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಪಂದ್ಯದ ಟಿಕೆಟ್‌ಗಳ ಬೆಲೆಯನ್ನು ಸೋಮವಾರ ಪ್ರಕಟಿಸಲಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇಲ್ಲಿ ಮುಖಾಮುಖಿಯಾಗಲಿವೆ. ₹ 900 ರಿಂದ ₹ 3000 ಬೆಲೆಯವರೆಗಿನ ಟಿಕೆಟ್‌ಗಳು ಇವೆ. ಈ ಕ್ರೀಡಾಂಗಣದಲ್ಲಿ 63,500 ಪ್ರೇಕ್ಷಕರ ಆಸನ ಸಾಮರ್ಥ್ಯವಿದೆ. ಇಲ್ಲಿ ಒಟ್ಟು ವಿಶ್ವಕಪ್ ಟೂರ್ನಿಯ ಐದು ಪಂದ್ಯಗಳು ನಡೆಯಲಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.