ವಿಂಡೀಸ್‌ ಪ್ರವಾಸ: ಭಾರತ ಟಿ20 ತಂಡದಲ್ಲಿ ತಿಲಕ್ ವರ್ಮಾಗೆ ಸ್ಥಾನ ನವದೆಹಲಿ: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿದ್ದ ತಿಲಕ್ ವರ್ಮಾ ಅವರನ್ನು ಭಾರತ ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ. ವೆಸ್ಟ್‌ ಇಂಡೀಸ್‌ನಲ್ಲಿ ಸರಣಿ ಆಡಲಿರುವ ಭಾರತ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡದಲ್ಲಿ 15 ಆಟಗಾರರು ತಂಡದಲ್ಲಿ ಸ್ಥಾನ ಪಡದಿದ್ದಾರೆ. ಹೈದರಾಬಾದಿನ ತಿಲಕ್ ವರ್ಮಾ ತಂಡಕ್ಕೆ ಇದೇ ಮೊದಲ ಬಾರಿ ಆಯ್ಕೆಯಾಗಿದ್ದಾರೆ. ವೇಗಿ ಆವೇಶ್ ಖಾನ್ ಮತ್ತು ಲೆಗ್‌ಸ್ಪಿನ್ನರ್ ರವಿ ಬಿಷ್ಣೋಯಿ ತಂಡಕ್ಕೆ ಮರಳಿದ್ದಾರೆ. ಇಬ್ಬರು ವಿಕೆಟ್‌ಕೀಪರ್, ಮೂವರು ಸ್ಪಿನ್ನರ್‌ಗಳು ತಂಡದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ ಉಪನಾಯಕನಾಗಿದ್ದಾರೆ. ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್‌ಕೀಪರ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯಿ, ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಆವೇಶ್ ಖಾನ್, ಮುಕೇಶ್ ಕುಮಾರ್. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.