2023: ಫೈನಲ್‌ನಲ್ಲಿ ರ‍್ಯಾಪರ್ ಡಿವೈನ್ ಕಾರ್ಯಕ್ರಮ ಅಹಮದಾಬಾದ್ (ಗುಜರಾತ್): ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯು ಈಗ ಕೊನೆಯ ಹಂತ ತಲುಪಿದೆ. ರ‍್ಯಾಪರ್ ಡಿವೈನ್ ಐಪಿಎಲ್‌ 2023ಕ್ಕೆ ಸಂಗೀತದ ಆರಂಭವನ್ನು ನೀಡಿದ್ದು, ಸಂಗೀತದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಪ್ರಶಸ್ತಿಗಾಗಿ ಸೆಣಸಾಡುತ್ತಿವೆ. ಇಂತಹ ವಿಶೇಷ ಸಂದರ್ಭದಲ್ಲಿ ರ‍್ಯಾಪರ್ ಕಿಂಗ್‌ ತಮ್ಮ ಸಂಗೀತದ ಮೂಲಕ ಪ್ರದರ್ಶನವನ್ನು ನೀಡಿದ್ದಾರೆ. ಅವರು ತಮ್ಮ ಹಿಟ್ 'ತು ಆಕೆ ದೇಖ್ಲೆ', 'ಮಾನ್ ಮೇರಿ ಜಾನ್' ಮತ್ತು ಇತರ ಹಾಡುಗಳೊಂದಿಗೆ ತಮ್ಮ ಪ್ರದರ್ಶನವನ್ನು ಪ್ರಾರಂಭಿಸಿದರು. 🙌 🎶🎶# | # | # ../6FeRRLO4qw ಭಾನುವಾರ ರಾತ್ರಿ ನಡೆಯಬೇಕಿದ್ದ ಐಪಿಎಲ್‌ ಫೈನಲ್‌ ಪಂದ್ಯ ಮಳೆಯ ಕಾರಣದಿಂದಾಗಿ ಮೀಸಲು ದಿನವಾದ ಇಂದಿಗೆ (ಸೋಮವಾರ) ಮುಂದೂಡಲಾಗಿತ್ತು. ಸದ್ಯ ಗುಜರಾತ್‌ ಟೈಟನ್ಸ್ ವಿರುದ್ಧ ಟಾಸ್‌ ಗೆದ್ದಿರುವ ಚೆನ್ನೈ, ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದು, ಎರಡು ತಂಡಗಳ ನಡುವೆ ರೋಚಕ ಹಣಾಹಣಿ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡವು ಸತತ ಎರಡನೇ ಬಾರಿ ಪ್ರಶಸ್ತಿ ಜಯಿಸುವ ಛಲದಲ್ಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ತಂಡವು ಐದನೇ ಬಾರಿ ಟ್ರೋಫಿಯನ್ನು ತನ್ನದಾಗಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.