2023 | ಗುಜರಾತ್ ಟೈಟನ್ಸ್‌ ವಿರುದ್ಧ ಟಾಸ್‌ ಗೆದ್ದ ಚೆನ್ನೈ, ಬೌಲಿಂಗ್ ಆಯ್ಕೆ ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯು ಈಗ ಕೊನೆಯ ಹಂತ ತಲುಪಿದೆ. ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಸದ್ಯ ಗುಜರಾತ್ ಟೈಟನ್ಸ್‌ ವಿರುದ್ಧ ಟಾಸ್‌ ಗೆದ್ದಿರುವ ಚೆನ್ನೈ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳಲ್ಲೂ ಯಾವುದೇ ಬದಲಾವಣೆ ಇಲ್ಲ. ಭಾನುವಾರ ರಾತ್ರಿ ನಡೆಯಬೇಕಿದ್ದ ಐಪಿಎಲ್‌ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ಇದರಿಂದ ಪಂದ್ಯವನ್ನು ಮೀಸಲು ದಿನವಾದ ಇಂದಿಗೆ (ಸೋಮವಾರ) ಮುಂದೂಡಲಾಯಿತ್ತು. ಐಪಿಎಲ್‌ ಟೂರ್ನಿಯ 16 ವರ್ಷಗಳ ಇತಿಹಾಸದಲ್ಲಿ ಫೈನಲ್‌ ಪಂದ್ಯ ಮೀಸಲು ದಿನಕ್ಕೆ ಮುಂದೂಡಿದ್ದು ಇದೇ ಮೊದಲು. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡವು ಸತತ ಎರಡನೇ ಬಾರಿ ಪ್ರಶಸ್ತಿ ಜಯಿಸುವ ಛಲದಲ್ಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ತಂಡವು ಐದನೇ ಬಾರಿ ಟ್ರೋಫಿಯನ್ನು ತನ್ನದಾಗಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ. 🚨 🚨 . ▶️ ://./# | # | # ../ # ! ▶️ ://./# | # ../ ! 🏟️ 🔥🔥 🙌# | # | # | @ ../HSCrTJJ14W ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.