2023: ಕೋಲ್ಕತ್ತಗೆ 145 ರನ್‌ಗಳ ಸಾಧಾರಣ ಗುರಿ ನೀಡಿದ ಚೆನ್ನೈ ಚೆನ್ನೈ: ಇಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತ ನೈಟ್ ರೈಡರ್ಸ್‌ಗೆ 145 ರನ್‌ಗಳ ಸಾಧಾರಣ ಗುರಿ ನೀಡಿದೆ. ಬೌಲಿಂಗ್‌ಗೆ ಅನುಕೂಲಕರವಾದ ಪಿಚ್‌ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ತಂಡದ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರು. ಡಿವೊನ್ ಕಾನ್ವೆ 30 ಮತ್ತು ಶಿವಂ ದುಬೆ 34 ಎಸೆತಗಳಲ್ಲಿ 48 ರನ್ ಸಿಡಿಸಿ ಚೆನ್ನೈ ತಂಡದ ಗೌರವಾನ್ವಿತ ಮೊತ್ತಕ್ಕೆ ನೆರವಾದರು. ಉಳಿದಂತೆ ರವೀಂದ್ರ ಜಡೇಜ 20, ರುತುರಾಜ್ ಗಾಯಕ್ವಾಡ್ 17 ರನ್ ಗಳಿಸಿದರು. 20 ಓವರ್‌ಗಳ ಅಂತ್ಯಕ್ಕೆ ಚೆನ್ನೈ 6 ವಿಕೆಟ್ ಕಳೆದುಕೊಮಡು 144 ರನ್ ಗಳಿಸಲಷ್ಟೇ ಶಕ್ತವಾಯಿತು. ವರುಣ್ ಚಕ್ರವರ್ತಿ ಮತ್ತು ಸುನಿಲ್ ನರೈನ್ ತಲಾ 2 ವಿಕೆಟ್ ಉರುಳಿಸಿದರು. ಸಂಕ್ಷಿಪ್ತ ಸ್ಕೋರ್ ಚೆನ್ನೈ ಸೂಪರ್ ಕಿಂಗ್ಸ್: 144/6 * ಡಿವೊನ್ ಕಾನ್ವೆ: 30 * ಶಿವಂ ದುಬೆ: 48 ರನ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.