ನಿತೀಶ್ ರಾಣಾಗೆ ₹ 12 ಲಕ್ಷ ದಂಡ ನವದೆಹಲಿ(ಪಿಟಿಐ): ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣಾ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ. ಈಡನ್ ಗಾರ್ಡನ್‌ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಕೋಲ್ಕತ್ತ ತಂಡವು ನಿಗದಿಯ ವೇಳೆಯಲ್ಲಿ ಓವರ್‌ಗಳನ್ನು ಪೂರೈಸುವಲ್ಲಿ ವಿಫಲವಾಗಿತ್ತು. ಐಪಿಎಲ್ ನಿಯಮದಡಿಯಲ್ಲಿ ಕನಿಷ್ಟ ಓವರ್‌ ರೇಟ್‌ ಲೋಪವೆಂದು ಪರಿಗಣಿಸಲಾಗಿದೆ. ಇದರಿಂದಾಗಿ ತಂಡದ ನಾಯಕನಿಗೆ ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಕೋಲ್ಕತ್ತ ತಂಡವು ಐದು ವಿಕೆಟ್‌ಗಳಿಂದ ಜಯಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.