2023: ಕೆಕೆಆರ್ ವಿರುದ್ಧ ಹೈದರಾಬಾದ್ ಗೆಲುವಿಗೆ 172 ರನ್ ಗುರಿ ಹೈದರಾಬಾದ್: ಐಪಿಎಲ್ 2023 ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡವು 172 ರನ್‌ಗಳ ಗೆಲುವಿಗೆ ಗುರಿ ಪಡೆದಿದೆ. ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಕೆಕೆಆರ್, ಒಂಬತ್ತು ವಿಕೆಟ್ ನಷ್ಟಕ್ಕೆ 171 ರನ್ ಪೇರಿಸಿತು. ಕೋಲ್ಕತ್ತ ಪರ ರಿಂಕು ಸಿಂಗ್ ಗರಿಷ್ಠ 46 ರನ್ ಗಳಿಸಿದರು. ನಾಯಕ ನಿತೀಶ್ ರಾಣಾ 42 ರನ್‌ಗಳ ಕೊಡುಗೆ ನೀಡಿದರು. ಆ್ಯಂಡ್ರೆ ರಸೆಲ್ 24 ಹಾಗೂ ಜೇಸನ್ ರಾಯ್ 20 ರನ್ ಗಳಿಸಿದರು. ಹೈದರಾಬಾದ್ ಪರ ಮಾರ್ಕೊ ಜಾನ್ಸೆನ್ ಹಾಗೂ ಟಿ. ನಟರಾಜನ್ ತಲಾ ಎರಡು ವಿಕೆಟ್ ಕಬಳಿಸಿದರು. !# 171/9 .# . ! - ://./dTunuF3aow # # #IPL2023 ../hoIGEZw0j1 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.