ಮೊಹಮ್ಮದ್ ಶಮಿ ವಿರುದ್ಧ ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದ ಪತ್ನಿ ಹಸೀನ್‌ ಜೋಹಾನ್ ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ತಂಡದ ಬೌಲರ್ ಮೊಹಮ್ಮದ್ ಶಮಿ ವಿರುದ್ಧ ಪತ್ನಿ ಹಸೀನ್ ಜೋಹಾನ್ ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ‌ಶಮಿ ವಿರುದ್ಧದ ಬಂಧನ ವಾರೆಂಟ್‌ ಹಿಂಪಡೆಯುವಂತೆ ಸ್ಥಳೀಯ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ಹಸೀನ್ ಜೋಹಾನ್ ಸುಪ್ರಿಂ ಕೋರ್ಟ್‌ ಮೊರೆ ಹೋಗಿದ್ದಾರೆ. ಮೊಹಮ್ಮದ್ ಶಮಿ ವಿರುದ್ಧದ ಬಂಧನ ವಾರೆಂಟ್ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ. ಶಮಿ ಮತ್ತು ಹಸೀನಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು. ಅವರು ಐದಾರೂ ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಇವರಿಗೆ ಒಂದು ಹೆಣ್ಣು ಮಗು ಇದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.