2023: ಲಖನೌ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ ಲಖನೌ: ಇಲ್ಲಿ ನಡೆಯುತ್ತಿರುವ ಲಖನೌ ಸೂಪರ್‌ ಜೈಂಟ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇತ್ತಂಡಗಳು ಈ ಆವೃತ್ತಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಮೊದಲ ರೋಚಕ ಪಂದ್ಯದಲ್ಲಿ ಲಖನೌ ತಂಡ, ಆರ್‌ಸಿಬಿಯನ್ನು ಮಣಿಸಿತ್ತು. ಈ ಪಂದ್ಯ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿ ವಿರಾಟ್ ಕೊಹ್ಲಿ ಪಡೆ ಇದೆ. ಆ ಪಂದ್ಯದಲ್ಲಿ ಆರ್‌ಸಿಬಿ 213 ರನ್‌ ಗುರು ನೀಡಿತ್ತು. 9 ವಿಕೆಟ್ ಕಳೆದುಕೊಂಡು ಕೊನೆಯ ಎಸೆತದಲ್ಲಿ ಗುರಿ ತಲುಪುವ ಮೂಲಕ ಲಖನೌ 1 ವಿಕೆಟ್‌ನಿಂದ ಜಯ ದಾಖಲಿಸಿತ್ತು. ಈ ನಡುವೆ ಗಾಯಗೊಂಡಿರುವ ಡೇವಿಡ್ ವಿಲ್ಲಿ ಬದಲಿಗೆ ಕೇದಾರ್ ಜಾಧವ್ ಅವರನ್ನು ಆರ್‌ಸಿಬಿ ತಂಡಕ್ಕೆ ಸೇರಿಸಿಕೊಂಡಿದ್ದಾರೆ. ಲಖನೌ ತಂಡ: ಕೆ.ಎಲ್. ರಾಹುಲ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೋಯ್ನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್, ಕೆ. ಗೌತಮ್, ನವೀನ್ ಉಲ್ ಹಕ್, ರವಿ ಬಿಷ್ಣೋಯಿ, ಅಮಿತ್ ಮಿಶ್ರಾ, ಯಶ ಠಾಕೂರ್ ಆರ್‌ಸಿಬಿ ತಂಡ: ಫಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಅನೂಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ರೊಮ್ರೋರ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರಂ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.