2023: ಮುಂಬೈಗೆ 208 ರನ್‌ಗಳ ಗೆಲುವಿನ ಗುರಿ ನೀಡಿದ ಗುಜರಾತ್ ಅಹಮದಾಬಾದ್: ಇಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಮುಂಬೈ ಇಂಡಿಯನ್ಸ್‌ಗೆ 208 ರನ್‌ಗಳ ಗೆಲುವಿನ ಗುರಿ ನೀಡಿದೆ. ! @gujarat_titans 🔥🔥@ 🆙 👊🏻 ▶️ ://./PXDi4zeBoD# | # ../yOgliD75Zd ಮೊದಲು ಬ್ಯಾಟ್‌ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 207ರನ್‌ ಗಳಿಸಿತು. ಶುಭುಮನ್‌ಗಿಲ್‌ 56, ಮಿಲ್ಲರ್‌ 46, ಅಭಿನವ್‌ ಮನೋಹರ್‌ 42 ರನ್‌ ಗಳಿಸಿ ಗಮನ ಸೆಳೆದರು. ನಾಯಕ ಹಾರ್ದಿಕ್ ಪಾಂಡ್ಯ 13ರನ್‌ಗಳಿಗೆ ಔಟಾದರು. ಮುಂಬೈ ಪರ ಪಿಯೂಶ್‌ ಚಾವ್ಲಾ 2 ವಿಕೆಟ್‌ ಪಡೆದರು. ಇದುವರೆಗೆ ಗುಜರಾತ್‌ ಆರು ಪಂದ್ಯಗಳನ್ನು ಆಡಿದೆ. ಅದರಲ್ಲಿ ನಾಲ್ಕರಲ್ಲಿ ಜಯಿಸಿ, ಎರಡರಲ್ಲಿ ಸೋತಿದೆ. ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮುಂಬೈ ತಂಡ ಟೂರ್ನಿಯ ಆರಂಭದಲ್ಲಿ ಸತತ ಎರಡು ಪಂದ್ಯಗಳಲ್ಲಿ ಸೋತಿತ್ತು. ನಂತರ ಮೂರು ಪಂದ್ಯಗಳಲ್ಲಿ ಜಯಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.