2023: ಗುಜರಾತ್ ವಿರುದ್ಧ ಟಾಸ್‌ ಗೆದ್ದ ಮುಂಬೈ; ಬೌಲಿಂಗ್‌ ಆಯ್ಕೆ ಅಹಮದಾಬಾದ್: ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವು ಮಂಗಳವಾರ ಇಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಆಡಲಿದ್ದು ಮೊದಲು ಬ್ಯಾಟ್‌ ಮಾಡಲಿದೆ. 🚨 🚨@ @gujarat_titans. ▶️ ://./PXDi4zeBoD# | # ../ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್‌ ಆಯ್ದುಕೊಂಡಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಇದುವರೆಗೆ ಆರು ಪಂದ್ಯಗಳನ್ನು ಆಡಿದೆ. ಅದರಲ್ಲಿ ನಾಲ್ಕರಲ್ಲಿ ಜಯಿಸಿ, ಎರಡರಲ್ಲಿ ಸೋತಿದೆ. ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಮುಂಬೈ ತಂಡವು ಟೂರ್ನಿಯ ಆರಂಭದಲ್ಲಿ ಸತತ ಎರಡು ಪಂದ್ಯಗಳಲ್ಲಿ ಸೋತಿತ್ತು. ನಂತರ ಮೂರು ಪಂದ್ಯಗಳಲ್ಲಿ ಜಯಿಸಿತ್ತು. ಗುಜರಾತ್ ತಂಡದ ಆರಂಭಿಕ ಜೋಡಿ ಶುಭಮನ್ ಗಿಲ್ ಹಾಗೂ ವೃದ್ಧಿಮಾನ್ ಸಹಾ ಲಯದಲ್ಲಿದ್ದಾರೆ. ಸಾಯಿ ಕಿಶೋರ್, ಸಾಯಿ ಸುದರ್ಶನ್ ಮತ್ತು ವಿಜಯಶಂಕರ್ ಕೂಡ ಮಧ್ಯಮಕ್ರಮಾಂಕದಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಅವರು ಮುಂಬೈ ಬೌಲರ್‌ಗಳಿಗೆ ಕಠಿಣ ಸವಾಲೊಡ್ಡುವ ನಿರೀಕ್ಷೆ ಇದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.